ಕೋಟೆನಾಡು, ಅರಮನೆ ನಗರಿಯಲ್ಲಿಂದು ಮೋದಿ ಅಬ್ಬರ

ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗದ ಮುರುಘ ರಾಜೇಂದ್ರ ಕ್ರೀಡಾಂಗಣ ಮತ್ತು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶ.

Last Updated : Apr 9, 2019, 07:50 AM IST
ಕೋಟೆನಾಡು, ಅರಮನೆ ನಗರಿಯಲ್ಲಿಂದು ಮೋದಿ ಅಬ್ಬರ title=

ಬೆಂಗಳೂರು: ಕೋಟೆನಾಡು ಚಿತ್ರದುರ್ಗ ಮತ್ತು ಅರಮನೆ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಮೊದಲಿಗೆ ಕೋಟೆನಾಡಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಒನಕೆ ಓಬವ್ವ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ  ಮಧ್ಯಾಹ್ನ 1 ಗಂಟೆಗೆ ಮುರುಘ ರಾಜೇಂದ್ರ ಕ್ರೀಡಾಂಗಣಕ್ಕೆ ಆಗಮಿಸಲಿರುವ ಮೋದಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಳಿಕ ಮಲ್ಲಿಗೆ ನಗರಿ ಮೈಸೂರಿಗೆ ತೆರಳಲಿರುವ ಮೋದಿ ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. 

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಚಿತ್ರದುರ್ಗ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಹಸ್ರಾರು ಮಂದಿ ಆಗಮಿಸುವ ನಿರೀಕ್ಷೆಯಿದೆ.

Trending News