PM Modi in Bengaluru: ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ 108 ಅಡಿ ಎತ್ತರದ ಈ ಪ್ರತಿಮೆಗೆ ‘ಪ್ರಗತಿಯ ಪ್ರತಿಮೆ’ಎಂದು ರಾಜ್ಯ ಸರ್ಕಾರ ನಾಮಕರಣ ಮಾಡಿದೆ.

Written by - Puttaraj K Alur | Last Updated : Nov 11, 2022, 01:24 PM IST
  • ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರ ಕಂಚಿನ ಪ್ರತಿಮೆ ಲೋಕಾರ್ಪಣೆ
  • 84 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರತಿಮೆ ಉದ್ಘಾಟಿಸಿದ ಪ್ರಧಾನಿ ಮೋದಿ
  • ಈ ಪ್ರತಿಮೆ ನಿರ್ಮಾಣಕ್ಕೆ 120 ಟನ್ ಉಕ್ಕು, 98 ಟನ್‌ ಕಂಚನ್ನು ಬಳಕೆ ಮಾಡಲಾಗಿದೆ
PM Modi in Bengaluru: ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ title=
ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು(ನ.11) ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿ ಅನಾವರಣಗೊಂಡಿರುವ 108 ಅಡಿ ಎತ್ತರದ ಈ ಪ್ರತಿಮೆಗೆ ‘ಪ್ರಗತಿಯ ಪ್ರತಿಮೆ’ಎಂದು ರಾಜ್ಯ ಸರ್ಕಾರ ನಾಮಕರಣ ಮಾಡಿದೆ.

ಇದನ್ನೂ ಓದಿ: ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ: ಸಕಲ ಸಿದ್ಧತೆ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ನಗರ ನಿರ್ಮಾತೃಗಳ ಪೈಕಿ ಕೆಂಪೇಗೌಡರ ಪ್ರತಿಮೆಯು ವಿಶ್ವದ ಅತಿ ಎತ್ತರದ ಪ್ರತಿಮೆ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಗುಜರಾತ್‌ನ ನರ್ಮದಾ ನದಿಯ ದ್ವೀಪದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್‌ರಿಗೆ ಸಮರ್ಪಿಸಲಾದ  ‘ಏಕತಾ ಪ್ರತಿಮೆ’ಯನ್ನು ನಿರ್ಮಾಣ ಮಾಡಿರುವ ರಾಮ್ ಸುತಾರ್ ಕ್ರಿಯೇಷನ್ಸ್ ಅವರೇ ಕೆಂಪೇಗೌಡರ ಪ್ರತಿಮೆ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.

ಕೆಂಪೇಗೌಡರ ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದೆ. ನಾಡಪ್ರಭುಗಳ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿರುವುದು ವಿಶೇಷ. ಈ ಪ್ರತಿಮೆ ನಿರ್ಮಾಣಕ್ಕೆ ಬರೋಬ್ಬರಿ 120 ಟನ್ ಉಕ್ಕನ್ನು ಬಳಕೆ ಮಾಡಲಾಗಿದ್ದು, 98 ಟನ್‌ ಕಂಚನ್ನು ಬಳಸಲಾಗಿದೆ.

ಇದನ್ನೂ ಓದಿಬೆಂಗಳೂರಿಗೆ ‘ನಮೋ’: ರೈಲು ಸೇವೆಯಲ್ಲಿ ವ್ಯತ್ಯಯ, ಟ್ರಾಫಿಕ್ ಜಾಮ್, ಕೆಲ ರಸ್ತೆಗಳು ಬಂದ್!

ಬೆಂಗಳೂರು ನಗರದಲ್ಲಿಯೇ ಕೆಂಪೇಗೌಡರ ಈ ಪ್ರತಿಮೆ ಅತಿ ಎತ್ತರದ ಪ್ರತಿಮೆ ಅನ್ನೋ ಹೆಗ್ಗಳಿಕೆ ಹೊಂದಿದೆ. ಇದರ ಜಾಗದಲ್ಲಿಯೇ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News