ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಂಧನ

ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ಬಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. 

Last Updated : Dec 3, 2018, 07:13 PM IST
ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬಂಧನ title=

ಹೊನ್ನಾಳಿ: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ಬಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. 

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ರೇಣುಕಾಚಾರ್ಯ ನೇತೃತ್ವದಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಹೊನ್ನಾಳಿ ಬಂದ್ ಗೆ ಕರೆ ನೀಡಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಮತ್ತು ರೇಣುಕಾಚಾರ್ಯ ನಡುವೆ ತೀವ್ರ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅಲ್ಲದೆ, ಸುಮಾರು 10 ಮಡಿ ಬಿಜೆಪಿ ಕಾರ್ಯಕರ್ತರನ್ನೂ ಪೊಲೀಸರು ಬಂಧಿಸಿದ್ದಾರೆ.

ಹೊನ್ನಾಳಿಯಲ್ಲಿ ಭತ್ತ-ಮೆಕ್ಕೆ ಜೋಳ ಖರೀದಿ ಕೇಂದ್ರ ಸ್ಥಾಪನೆ ಮತ್ತು ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಸೇರ್ಪಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂದ್ ಗೆ ಕರೆ ನೀಡಲಾಗಿತ್ತು.

Trending News