ಶಾಲಾ ಶಿಕ್ಷಕನಿಗೆ ಪೊಲೀಸ್‌ ಕಾನ್‌ಸ್ಟೆಬಲ್‌ ಅವಾಚ್ಯ ಶಬ್ದಗಳಿಂದ ನಿಂದನೆ; ಕಾನ್‌ಸ್ಟೆಬಲ್‌ ವಿರುದ್ಧ ಕ್ರಮ!

ನಿವೇಶನ ಒತ್ತುವರಿ ಕುರಿತಂತೆ ಪೊಲೀಸ್‌ ಕಾನ್‌ಸ್ಟೆಬಲ್‌, ಶಾಲೆಯ ಶಿಕ್ಷಕನ್ನು ಅವಾಚ ಶಬ್ಧಗಳಿಂದ ನಿಂದಿಸಿದ್ದಾರೆ. ಶಿಕ್ಷಕ & ಚಿದಾನಂದ ತಮ್ಮ ಬಡವಾಣೆಯಲ್ಲಿ ಮನೆ ಕಟ್ಟುವ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್‌ ತಡೆದು ಕೆಟ್ಟ ಪದಗಳಿಂದ ಬೈದಿರುವ ವಿಡಿಯೋ ಸಖತ್‌ ವೈರಲ್‌ ಆಗಿದೆ. 

Written by - Zee Kannada News Desk | Last Updated : Jun 7, 2023, 12:27 PM IST
  • ಸರ್ಕಾರಿ ಶಾಲಾ ಶಿಕ್ಷಕರಿಗೆ ಪೊಲೀಸ್‌ ಕಾನ್‌ಸ್ಟೆಬಲ್‌ ಅವಾಚ್ಯ ಶಬ್ದಗಳಿಂದ ನಿಂದನೆ
  • ಕಾನ್‌ಸ್ಟೆಬಲ್‌ ಜೀವ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್
  • ಅವಾಚ್ಯ ಶಬ್ದಗಳಿಂದ ನಿಂದನೆಸಿರುವ ಹಿನ್ನಲೆ ಪೊಲೀಸ್‌ ಕಾನ್‌ಸ್ಟೆಬಲ್‌ ವಿರುದ್ಧ ಕ್ರಮ
ಶಾಲಾ ಶಿಕ್ಷಕನಿಗೆ ಪೊಲೀಸ್‌ ಕಾನ್‌ಸ್ಟೆಬಲ್‌ ಅವಾಚ್ಯ ಶಬ್ದಗಳಿಂದ ನಿಂದನೆ; ಕಾನ್‌ಸ್ಟೆಬಲ್‌ ವಿರುದ್ಧ ಕ್ರಮ! title=

ವಿಜಯಪುರ: ನಗರದಲ್ಲಿ ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಸರ್ಕಾರಿ ಶಾಲೆಯ ಶಿಕ್ಷಕರ ನಡುವೆ ಮಾತಿನ ಚಕಮಕಿ ನಡೆದಿದೆ. ತಿಕೋಟಾ ತಾಲ್ಲೂಕಿನ ಬರಟಗಿಯಲ್ಲಿ ನಿವೇಶನ ಒತ್ತುವರಿ ಕುರಿಂತೆ  ಕೆಲವು ದಿನಗಳಿಂದ ವಾಗ್ವಾದ ನಡೆಯುತ್ತಿತು. 

ಇದನ್ನೂ ಓದಿ: Sexual Harassment: ಯಾರಿಗಾದರೂ ʼಒಳ್ಳೆ ಫಿಗರ್ ಗುರುʼ ಎಂದು ರೇಗಿಸುವ ಮುನ್ನ ಹುಷಾರ್‌ !

ಆದರೆ ಇದೀಗ ಪ್ರಾಥಮಿಕ ಶಾಲೆಯ ಶಿಕ್ಷಕ&ಚಿದಾನಂದ ಸಿದ್ದಪ್ಪ ಜಿಗಜೇವಣಿ ಜೊತೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಅಶೋಕ ದುಂಡಪ್ಪ ಮಿಂಚನಾಳ ನಿವೇಶನ ಒತ್ತುವರಿ ಕುರಿತಂತೆ ಪೊಲೀಸ್‌ ಕಾನ್‌ಸ್ಟೆಬಲ್‌, ಶಾಲೆಯ ಶಿಕ್ಷಕನ್ನು ಅವಾಚ ಶಬ್ಧಗಳಿಂದ ನಿಂದಿಸಿದ್ದಾರೆ. ಶಿಕ್ಷಕ & ಚಿದಾನಂದ ತಮ್ಮ ಬಡವಾಣೆಯಲ್ಲಿ ಮನೆ ಕಟ್ಟುವ ವೇಳೆ  ಪೊಲೀಸ್‌ ಕಾನ್‌ಸ್ಟೆಬಲ್‌ ತಡೆದು ಕೆಟ್ಟ ಪದಗಳಿಂದ ಬೈದಿರುವ ವಿಡಿಯೋ ಸಖತ್‌ ವೈರಲ್‌ ಆಗಿದೆ. 

ಬಡಾವಣೆಯಲ್ಲಿ ಅಕ್ಕಪಕ್ಕದಲ್ಲಿ ನಿವೇಶನ ಹೊಂದಿರುವ ತಿಕೋಟಾ ತಾಲ್ಲೂಕಿನ ಬರಟಗಿ ಸರ್ಕಾರಿ ಮಾದರಿ ಪ್ರಾಥಮಕ ಶಾಲೆಯ ಶಿಕ್ಷಕ ಚಿದಾನಂದ ಜಿಗಜೇವಣಿ ಮತ್ತು ವಿಜಯಪುರ ಗ್ರಾಮೀಣ ಠಾಣೆ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಅಶೋಕ ಮಿಂಚನಾಳ ನಡುವೆ ನಿವೇಶನ ಒತ್ತುವರಿ ಸಂಬಂಧಿಸಿದಂತೆ ವಿವಾದ ಏರ್ಪಟ್ಟಿದೆ.

ನಗರದಲ್ಲಿ ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ಸರ್ಕಾರಿ ಶಾಲೆಯ ಶಿಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆಯ ವಿಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: Ishwara Khandre : ದೇಶದ ಅಭಿವೃದ್ಧಿಗೆ ಲಿಂಗಾಯಿತ ವೀರಶೈವರ ಕೊಡುಗೆ ಅಪಾರ - ಈಶ್ವರ ಖಂಡ್ರೆ

ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಅವರು ಪೊಲೀಸ್‌ ಕಾನ್‌ಸ್ಟೆಬಲ್‌ ವಿರುದ್ಧ ಅಶಿಸ್ತು ಪ್ರದರ್ಶನ ಹಾಗೂ ಇಲಾಖೆಗೆ ಅಗೌರವವಾಗುವ ರೀತಿಯ ವರ್ತನೆ ಹಿನ್ನೆಲೆಯಲ್ಲಿ ನೋಟಿಸ್‌ ನೀಡಿ, ಒಂದು ವರ್ಷದ ಇನ್‌ಕ್ರಿಮೆಂಟ್‌ ಕಡಿತಗೊಳಿಸಿ, ಕ್ರಮಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News