ಕರ್ತವ್ಯದ ವೇಳೆ ಕುಸಿದು ಬಿದ್ದು ಇನ್ಸ್ ಪೆಕ್ಟರ್ ಸಾವು

ವಿಧಾನಸೌಧ ಸೆಕ್ಯೂರಿಟಿ ಕರ್ತವ್ಯದಲ್ಲಿದ್ದ ಇನ್ಸ್ ಪೆಕ್ಟರ್ ಧನಂಜಯ್ ಕರ್ತವ್ಯದ್ದಲ್ಲಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Written by - VISHWANATH HARIHARA | Edited by - Manjunath Naragund | Last Updated : Dec 2, 2022, 09:15 PM IST
  • ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಸಹ ಇನ್ಸ್‌ಪೆಕ್ಟರ್ ಧನಂಜಯ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
  • ಧನಂಜಯ್ ಗೆ ಇಬ್ಬರು ಹೆಣ್ಣು ಮಕ್ಕಳಿದ್ದು2009 ನೇ ಬ್ಯಾಚ್ ನ ಪಿಎಸ್ ಐ ಆಗಿದ್ದರು.
ಕರ್ತವ್ಯದ ವೇಳೆ ಕುಸಿದು ಬಿದ್ದು ಇನ್ಸ್ ಪೆಕ್ಟರ್ ಸಾವು title=

ಬೆಂಗಳೂರು: ವಿಧಾನಸೌಧ ಸೆಕ್ಯೂರಿಟಿ ಕರ್ತವ್ಯದಲ್ಲಿದ್ದ ಇನ್ಸ್ ಪೆಕ್ಟರ್ ಧನಂಜಯ್ ಕರ್ತವ್ಯದ್ದಲ್ಲಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬೋನ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ ಪೆಕ್ಟರ್ ಧನಂಜಯ್ ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು.ಒಂದು ವಾರದ ಹಿಂದೆ ಡ್ಯೂಟಿಗೆ ಬಂದಿದ್ದ ಇನ್ಸ್ ಪೆಕ್ಟರ್ ಇಂದು ಕರ್ತವ್ಯದ ವೇಳೆ ಕುಸಿದು ಬಿದ್ದಿದ್ದರು.

ಇದನ್ನೂ ಓದಿ: ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಸಹ ಇನ್ಸ್‌ಪೆಕ್ಟರ್ ಧನಂಜಯ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಧನಂಜಯ್ ಗೆ ಇಬ್ಬರು ಹೆಣ್ಣು ಮಕ್ಕಳಿದ್ದು2009 ನೇ ಬ್ಯಾಚ್ ನ ಪಿಎಸ್ ಐ ಆಗಿದ್ದರು.

ಇದನ್ನೂ ಓದಿ: ಚಿಲುಮೆ ಅವ್ಯವಹಾರ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿಲ್ಲ

ಹಲಸೂರು,ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿ ಪಡೆದಿದ್ದ ಧನಂಜಯ್ ಸದ್ಯ ವಿಧಾನ ಸೌಧ ಸೆಕ್ಯೂರಿಟಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News