ಚುನಾವಣಾ ರಾಜಕೀಯಕ್ಕೆ 'ರಿಟೈರ್ಮೆಂಟ್' ಹೇಳಿದ 'ಮಾಜಿ ಸ್ಪೀಕರ್'..!

ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂಬುದಾಗಿ ವಿಷಾದ ವ್ಯಕ್ತ ಪಡಿಸಿ-ನಿವೃತ್ತಿ ಘೋಷಣೆ

Last Updated : Dec 7, 2020, 09:02 PM IST
  • ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ- ಮಾಜಿ ಸ್ಪೀಕರ್ ರಮೇಶ್ ಕುಮಾರ್
  • ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂಬುದಾಗಿ ವಿಷಾದ ವ್ಯಕ್ತ ಪಡಿಸಿ-ನಿವೃತ್ತಿ ಘೋಷಣೆ
  • , ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದ್ರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ರು.
ಚುನಾವಣಾ ರಾಜಕೀಯಕ್ಕೆ 'ರಿಟೈರ್ಮೆಂಟ್' ಹೇಳಿದ 'ಮಾಜಿ ಸ್ಪೀಕರ್'..! title=

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಣೆ ನಾಗುತ್ತೇನೆ ಎಂಬುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳುವ ಮೂಲಕ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.

ನಗರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ನಡೆದಂತ ಕಾಂಗ್ರೆಸ್(Congress) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂಬುದಾಗಿ ವಿಷಾದ ವ್ಯಕ್ತ ಪಡಿಸಿದರು.

ಕಾಂಗ್ರೆಸ್‌ ಹಿರಿಯ ನಾಯಕನನ್ನು ಭೇಟಿಯಾಗಿ ಜೆಡಿಎಸ್‌ಗೆ‌ ಆಹ್ವಾನ ನೀಡಿದ ಹೆಚ್ ಡಿಕೆ..!

ಇನ್ನೂ ಮುಂದುವರೆದು ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದ್ರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ರು. ಅಧಿಕಾರದಾಸೆಗೆ ಅನೈತಿಕ ರಾಜಕಾಣ ಮಾಡುತ್ತಿದ್ದಾರೆ ಎಂದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂಬುದಾಗಿ ರಾಜಕೀಯ ನಿವೃತ್ತಿ ಘೋಷಿಸಿದರು.

Congress: ಬೆಳಗಾವಿ ಲೋಕಸಭೆ ಬೈಎಲೆಕ್ಷನ್: ಸತೀಶ್ ಜಾರಕಿಹೊಳೆ’ಗೆ ಕಾಂಗ್ರೆಸ್ ಮಣಿ!

Trending News