ರಾಜಧಾನಿಯಲ್ಲಿ ನಾಳೆ ಪವರ್ ಕಟ್: ನಿಮ್ಮ ಏರಿಯಾದ ಹೆಸರೂ ಇದೆಯೇ? ಈಗಲೇ ಚೆಕ್ ಮಾಡಿ

ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಟಷ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ  ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಸಮಸ್ಯೆ ಎದುರಾಗಲಿದೆ ಎಂದು ತಿಳಿದುಬಂದಿದೆ. 

Written by - Yashaswini V | Last Updated : May 23, 2023, 03:47 PM IST
  • ನಾಳೆ ಸಿಲಿಕಾನ್ ಸಿಟಿಯ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
  • ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಪವರ್ ಕಟ್
  • ತುರ್ತು ನಿರ್ವಹಣಾ ಕೆಲಸ ಹಿನ್ನಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ರಾಜಧಾನಿಯಲ್ಲಿ ನಾಳೆ ಪವರ್ ಕಟ್: ನಿಮ್ಮ ಏರಿಯಾದ ಹೆಸರೂ ಇದೆಯೇ? ಈಗಲೇ ಚೆಕ್ ಮಾಡಿ  title=

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಟಷ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳ್ಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ- ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆ ಸಾಧ್ಯತೆ: ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ

ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ಪವರ್ ಕಟ್ ಸಮಸ್ಯೆ ಎದುರಾಗಲಿದೆ.  

ಇದನ್ನೂ ಓದಿ- Gadag: ಶೆಟ್ಟಿಕೆರೆಯಲ್ಲಿ ಅಪರೂಪದ ಪ್ರಾಣಿ ಪ್ರತ್ಯಕ್ಷ..!

ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್ 1ನೇ ಬ್ಲಾಕ್, 80 ಅಡಿ ರಸ್ತೆ, ಸಿ.ಎಂ.ಆರ್ ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಲೇಔಟ್, ಭಾರತ ಮಾತಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿಯಲ್ಲಿ ಮೇ 23 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News