ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಜಟಾಪಟಿ ತಾರಕಕ್ಕೆ : ನಿಯಂತ್ರಣಕ್ಕೆ ಹೈ ವಿಫಲ!?

Congress: ರಾಜ್ಯದಲ್ಲಿ ಕಾಂಗ್ರೆಸ್ ಪಾರ್ಟಿ ಪವರ್ ಶೇರಿಂಗ್ ವಿಚಾರದಲ್ಲಿ ತೀವ್ರ ಒಡಕು ಎದುರಿಸುತ್ತಿದ್ದು, ಈ ಕುರಿತು ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಬಣಬಡಿದಾಟದ ಮಧ್ಯೆ ಹೈಕಮಾಂಡ್ ಪ್ರತಿನಿಧಿ ರಣದೀಪ್ ಸಿಂಗ್ ಸುರ್ಜೇವಾಲಾ ಸರಣಿ ಸಭೆ ನಡೆಸಿದರು ಗೊಂದಲಕ್ಕೆ ಅಂತಿಮ ತೆರೆ ಎಳೆಯಲು ಸಾಧ್ಯವಾಗಿಲ್ಲ.

Written by - Prashobh Devanahalli | Edited by - Savita M B | Last Updated : Jan 13, 2025, 08:23 PM IST
  • ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷಗಳ ಸಂಪೂರ್ಣ ಅವಧಿ ಪೂರೈಸಬೇಕೆಂಬ ಅಭಿಪ್ರಾಯ
  • ಈ ಬಿಕ್ಕಟ್ಟನ್ನು ಪರಿಹರಿಸಲು ಸುರ್ಜೇವಾಲಾ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಜಟಾಪಟಿ ತಾರಕಕ್ಕೆ : ನಿಯಂತ್ರಣಕ್ಕೆ ಹೈ ವಿಫಲ!? title=

ಬೆಂಗಳೂರು : ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷಗಳ ಸಂಪೂರ್ಣ ಅವಧಿ ಪೂರೈಸಬೇಕೆಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದೂ, ಈ ವಿಚಾರದಲ್ಲಿ ಸಿದ್ದರಾಮಯ್ಯ ಆಪ್ತ ಶಾಸಕರು ಪ್ರಬಲವಾಗಿ ನಿಂತಿದ್ದಾರೆ.ಅತ್ತ , ಡಿಕೆಶಿ ಬೆಂಬಲಿಗರು ಸಿಎಂ ಹುದ್ದೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಿಕ್ಕಟ್ಟನ್ನು ಪರಿಹರಿಸಲು ಸುರ್ಜೇವಾಲಾ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ.

ದಲಿತ ನಾಯಕರು ಅಸಮಾಧಾನ ಹೊರಹಾಕಿದ್ದು,
ಸಾಮಾಜಿಕ ನ್ಯಾಯದ ಪರವಾಗಿ ದಲಿತ ನಾಯಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ದಲಿತ ನಾಯಕರ ಔತಣಕೂಟ ನಿಲ್ಲಿಸಿದ್ದು, ಸತೀಶ್ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ ಮತ್ತು ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸ್ಸಿ/ಎಸ್ಟಿ ಸಮುದಾಯದೊಂದಿಗೆ ಸಮಾವೇಶ ನಡೆಸಲು ಅವಕಾಶ ಮಾಡಿಕೊಡುವಂತೆ ಅವರು ಆಗ್ರಹಿಸಿದ್ದಾರೆ.

ಡಿಕೆ ಬಣದ ಒತ್ತಾಯ: 
ಸಿದ್ದರಾಮಯ್ಯ ಆಪ್ತರು ಪಕ್ಷದ ನಿಯಮಗಳನ್ನು ಮೀರಿ ನಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಡಿಕೆಶಿ ಬಣದ ಶಾಸಕರು ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಹಿರಿಯ ನಾಯಕರು ನೀಡಿದ ಪ್ರತಿಕ್ರಿಯೆಗಳು: 
ಹಿರಿಯ ನಾಯಕ ಆರ್.ವಿ.ದೇಶಪಾಂಡೆ, "ಸಿಎಂ ಹಾಗೂ ಡಿಕೆಶಿ ಎರಡೂ ಕಡೆಗಳು ಪಕ್ಷವನ್ನು ಬಲಪಡಿಸಲು ಕೆಲಸ ಮಾಡಬೇಕಾಗಿದೆ. ಸಿಎಂ ಆಗುವ ಆಸೆ ನನಗೂ ಇದೆ, ಆದರೆ ಈ ಹೊತ್ತಿಗೆ ನಾನು ಆಸ್ಪಿರೆಂಟ್ ಅಲ್ಲ" ಎಂದು ಹೇಳಿದ್ದಾರೆ. ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್ ಗೆ ಅಧಿಕಾರ ಇದೇ ಎಂದಿದ್ದಾರೆ.

ಬಹಿರಂಗ ಹೇಳಿಕೆಗಳಿಗೆ ಎಚ್ಚರಿಕೆ:
ಟಿ.ಬಿ.ಜಯಚಂದ್ರ, "ಸಂಪುಟ ಪುನರ್‌ ರಚನೆ ಅಥವಾ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ವೇದಿಕೆಯಲ್ಲೇ ನಡೆಯಬೇಕು. ಜಾತಿಯ ಮೇಲೆ ಆಧಾರಿತ ಬೇಡಿಕೆಗಳನ್ನು ತಾಳ್ಮೆಯಿಂದ ನಿರ್ವಹಿಸಬೇಕು" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಾರ್ಟಿಯ ಪವರ್ ಶೇರಿಂಗ್ ಬಿಕ್ಕಟ್ಟಿಗೆ ತಾತ್ಕಾಲಿಕ ಪರಿಹಾರ ಕಂಡುಹಿಡಿಯಲು ಹೈಕಮಾಂಡ್ ಪ್ರಯತ್ನ ಪಡುತ್ತಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿಕೆಶಿ ಬೆಂಬಲಿಗರ ನಡುವಿನ ಬಣಬಡಿದಾಟ ತೀವ್ರಗೊಳ್ಳುವ ಲಕ್ಷಣಗಳು ಇನ್ನೂ ಕಂಡು ಬರುತ್ತಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News