ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಿದೆ. 2019-20ನೇ ಸಾಲಿನಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದ್ದು ಎಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ಗೆ 33 ಪೈಸೆ ಹೆಚಿಸಲಾಗಿದೆ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭುದಯಾಲ್ ಮೀನಾ ಹೇಳಿದ್ದಾರೆ.
ವಿದ್ಯುತ್ ದರ ಪರಿಷ್ಕರಣೆ ಪ್ರಕಟವಾಗಿದ್ದು, ಎಲ್ಲ ಐದು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಪ್ರತಿ ಯೂನಿಟ್ಗೆ ಸರಾಸರಿ ವಿದ್ಯುತ್ ದರವನ್ನು 33 ಪೈಸೆಗೆ ಏರಿಕೆಗೆ ಒಪ್ಪಿಗೆ ಸೂಚಿಸಿದೆ. ಅದರಂತೆ ಬೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ ಯೂನಿಟ್ಗೆ 33 ಪೈಸೆ ಹೆಚ್ಚಳ ಎಂದು ಅವರು ತಿಳಿಸಿದರು.
ವಿದ್ಯುತ್ ಸರಬರಾಜು ಕಂಪನಿಗಳು ನವೆಂಬರ್ 2018 ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿದ್ಯುತ್ ದರ ಹೆಚ್ಚಳಕ್ಕೆ ಬ್ರೇಕ್ ಹಾಕಿದ್ದರು.