“ಹಸು ಏಕೆ ಕಡಿಯಬಾರದು..?” ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಪ್ರಭು ಚೌಹಾಣ್ ಕೆಂಡಾಮಂಡಲ

ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ನಿಜ ಬಣ್ಣವನ್ನು ತೋರಿಸಲು ಪ್ರಾರಂಭಿಸಿದೆ. ಯಾರ ಹೊಟ್ಟೆಯನ್ನು ತುಂಬಲು ಗೋವುಗಳನ್ನು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

Written by - Bhavishya Shetty | Last Updated : Jun 4, 2023, 12:44 PM IST
    • ಗೋವುಗಳನ್ನು ಏಕೆ ಕಡಿಯಬಾರದು ಎನ್ನುವ ನಿಮ್ಮ ಮನಸ್ಥಿತಿಯೇ ನನಗೆ ವಿಚಿತ್ರವಾಗಿ ಕಾಣಿಸುತ್ತಿದೆ
    • ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ನಿಜ ಬಣ್ಣವನ್ನು ತೋರಿಸಲು ಪ್ರಾರಂಭಿಸಿದೆ
    • ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪ್ರಭು ಚೌಹಾಣ್
“ಹಸು ಏಕೆ ಕಡಿಯಬಾರದು..?” ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಪ್ರಭು ಚೌಹಾಣ್ ಕೆಂಡಾಮಂಡಲ title=
Cow Protection

ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿದ್ದಾರೆ.

ಇದನ್ನೂ ಓದಿ: Share Market Update: ಸತತ ಎರಡು ದಿನಗಳ ಕುಸಿತಕ್ಕೆ ಬಿತ್ತು ಬ್ರೇಕ್, ಲೋಹ-ಆಟೋ ಸೇಕ್ಟರ್ ಗಳಲ್ಲಿ ಭಾರಿ ಖರೀದಿ

ಗೋವುಗಳನ್ನು ಏಕೆ ಕಡಿಯಬಾರದು ಎನ್ನುವ ನಿಮ್ಮ ಮನಸ್ಥಿತಿಯೇ ನನಗೆ ವಿಚಿತ್ರವಾಗಿ ಕಾಣಿಸುತ್ತಿದೆ. ಒಂದಿಷ್ಟು ಕಸಾಯಿ ಕಾಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಗೋವುಗಳ ದಾರುಣ ಅಂತ್ಯ ಎಲ್ಲವನ್ನು ನೋಡಿದ ನಂತರ ಮತ್ತೊಮ್ಮೆ ಆಲೋಚನೆ ಮಾಡಿ ಹೇಳಿಕೆ ನೀಡಿ” ಎಂದು ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ನಿಜ ಬಣ್ಣವನ್ನು ತೋರಿಸಲು ಪ್ರಾರಂಭಿಸಿದೆ. ಯಾರ ಹೊಟ್ಟೆಯನ್ನು ತುಂಬಲು ಗೋವುಗಳನ್ನು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ಗೋ ಹತ್ಯೆ ನಿಷೇಧ ಕಾಯ್ದೆ ಕಾಂಗ್ರೆಸ್ ಅವಧಿಯಲ್ಲಿ 1964ರಿಂದಲೂ ಅಸ್ತಿತ್ವದಲ್ಲಿತ್ತು. ಆಗಲೂ ಸಹ ಹಸುವನ್ನು ಕಡಿಯಬಾರದು ಎಂಬುದು ಕಾನೂನಾಗಿತ್ತು. ಆದರೆ ಆ ಕಾನೂನಿನಲ್ಲಿದ್ದ ಕೆಲ ದುರ್ಬಲವಾದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಗೋಹತ್ಯೆ ನಿಷೇಧ ಕಾಯ್ದೆಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಬಲಪಡಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೇವಲ ರಾಜಕೀಯ ಲಾಭ ನಷ್ಟದ ದೃಷ್ಟಿಯಿಂದ ನೋಡುವ ಬದಲು ಜನಸಾಮಾನ್ಯನ, ರೈತನ ಜೀವನದಲ್ಲಿ ಇರುವ ಅದರ ಭಾವನಾತ್ಮಕ ಸಂಬಂಧದ ಬಗ್ಗೆ ತಿಳಿದುಕೊಂಡು ಮಾತನಾಡುವುದು ಒಳ್ಳೆಯದು” ಎಂದು ಅವರು ಹೇಳಿದ್ದಾರೆ.

“ಮನೆಯಲ್ಲಿ ಗೋವು ಸಾಕುವುದಿಲ್ಲವೆಂದ ಮಾತ್ರಕ್ಕೆ ಅದರ ಬಗ್ಗೆ ಭಾವನಾತ್ಮಕ ಸಂಬಂಧ ಇರಬಾರದು ಎಂದೇನಿಲ್ಲ. ಅದು ತಾಯಿಯಂತೆ ನಿತ್ಯ ಪೂಜೆಗೊಳಗಾಗುವ ದೈವ. ಅದರ ಸಂರಕ್ಷಣೆ, ಪೋಷಣೆ ಮತ್ತು ಗೋ ತಳಿಗಳ ಅಭಿವೃದ್ಧಿ ಸರ್ಕಾರದ ಮೂಲ ಕರ್ತವ್ಯವಾಗಿರಬೇಕೇ ಹೊರತು ಗೋವುಗಳನ್ನು ಕಡಿಯುವುದಕ್ಕೆ ಪ್ರೇರೇಪಿಸುವುದಲ್ಲ” ಎಂದು ಸಚಿವ ಕೆ ವೆಂಕಟೇಶ್ ಅವರ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ

“ನಮ್ಮ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ಗೋವುಗಳ ಸಂರಕ್ಷಣೆಗೆ ಶ್ರಮ ಪಟ್ಟಿದ್ದೇವೆ. ಪ್ರಾಣಿ ಕಲ್ಯಾಣ ಸಹಾಯವಾಣಿ, ಪ್ರಾಣಿ ಕಲ್ಯಾಣ ಮಂಡಳಿ, ಜಿಲ್ಲೆಗೊಂದು ಗೋಶಾಲೆ, ಪಶು ಚಿಕಿತ್ಸಾ ವಾಹನ ಹೀಗೆ ಗೋ ಸಂರಕ್ಷಣೆಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Trending News: ಯುವ ರೈತನ ಮದುವೆ: ಎತ್ತಿನ ಬಂಡಿಯಲ್ಲಿ ನವ ವಧುವರನ ಮೆರವಣಿಗೆ!

ಗೋವನ್ನು ಒಮ್ಮೆ ವೈಜ್ಞಾನಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅಧ್ಯಯನ ನಡೆಸಿ ನಂತರ ತೀರ್ಮಾನಿಸಿ ಎಂದು ಕಾಂಗ್ರೆಸ್ಸಿನ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರಿಗೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News