Karnataka Budget 2024 :ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್ : ಸಚಿವ ಪ್ರಹ್ಲಾದ ಜೋಶಿ ಟೀಕೆ

ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಢೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಜೋಶಿ ಹೇಳಿದ್ದಾರೆ. 

Written by - Ranjitha R K | Last Updated : Feb 16, 2024, 06:06 PM IST
  • ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ
  • ಈ ಬಜೆಟ್ ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ - ಜೋಷಿ
  • ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್ ನಲ್ಲಿದೆ
Karnataka Budget 2024 :ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್ : ಸಚಿವ ಪ್ರಹ್ಲಾದ ಜೋಶಿ ಟೀಕೆ title=

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಮಾಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. 

ರಾಜಕೀಯ ಭಾಷಣ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಈ ಬಜೆಟ್ ಮಂಡನೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಢೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಜೋಶಿ ಹೇಳಿದ್ದಾರೆ. 

ಇದನ್ನೂ  ಓದಿ : ನಮ್ಮ ಬಜೆಟ್‌ ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ : ಡಿಸಿಎಂ

ಹಿಂದಿನ ಪ್ರಸ್ತಾವನೆಗಳೇ :
ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್ ಅಲ್ಲಿ ಇದೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೆಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ  ಕಸರತ್ತು ಆಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

ಸಾಲದ ಹೊರೆಯ ಬಜೆಟ್ : 
ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ.

ಇದನ್ನೂ  ಓದಿ : ಬಜೆಟ್ ಬಹಿಷ್ಕಾರದ ಮೂಲಕ ಬಿಜೆಪಿಯಿಂದ ರಾಜ್ಯದ ಜನರಿಗೆ ಅವಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News