ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ

ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.   

Last Updated : Mar 22, 2019, 02:27 PM IST
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ title=

ಹಾಸನ: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು. 

ತನ್ನ ತಾತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಮುನ್ನಡೆಸುವ ಹೊಣೆ ಹೊರಲು ಮುಂದಾಗಿರುವ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರು, ಪಕ್ಷದ ಕಾರ್ಯಕರ್ತರೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರು ಪ್ರಜ್ವಲ್ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದರು. 

ಇದಕ್ಕೂ ಮುನ್ನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಹೆಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಅವರನ್ನೊಳಗೊಂಡಂತೆ ತೆರೆದ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಪರ ಭರ್ಜರಿ ರೋಡ್ ಶೋ ನಡೆಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಅಭಿಮಾನಗಳು ಪ್ರಜ್ವಲ್ ರೇವಣ್ಣಗೆ 800 ಕೆ.ಜಿ. ತೂಕದಿಂದ ಕೂಡಿದ ಸೇಬುಗಳ ಹಾರ ಹಾಕಿ ಜೈಕಾರ ಕೂಗಿದ್ದು ವಿಶೇಷವಾಗಿತ್ತು. 

Trending News