ನಿರೀಕ್ಷಣಾ ಜಾಮೀನು ಮಂಜೂರು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಹಾಸನದ ಹೊಳೆನರಸೀಪುರ, ಬೆಂಗಳೂರಿನ ಸಿಐಡಿ-ಎಸ್‌ಐಟಿ ಮತ್ತು ಸೈಬರ್‌ ಪೊಲೀಸರು ದಾಖಲಿಸಿರುವ ಮೂರು ಪ್ರಕರಣಗಳಲ್ಲಿಯೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ನಡೆಸಿದರು.

Written by - Bhavya Sunil Bangera | Last Updated : May 29, 2024, 09:25 PM IST
    • ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಕೋರಿ ಅರ್ಜಿ
    • ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ
    • ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ
ನಿರೀಕ್ಷಣಾ ಜಾಮೀನು ಮಂಜೂರು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ title=
File Photo

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಹಾಸನದ ಹೊಳೆನರಸೀಪುರ, ಬೆಂಗಳೂರಿನ ಸಿಐಡಿ-ಎಸ್‌ಐಟಿ ಮತ್ತು ಸೈಬರ್‌ ಪೊಲೀಸರು ದಾಖಲಿಸಿರುವ ಮೂರು ಪ್ರಕರಣಗಳಲ್ಲಿಯೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ನಡೆಸಿದರು.

ಇದನ್ನೂ ಓದಿ: ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..

ವಿಚಾರಣೆಯಲ್ಲಿ ಹಾಜರಿದ್ದ ವಿಶೇಷ ತನಿಖಾ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರಿಗೆ ನೋಟಿಸ್‌ ಪಡೆಯಲು ನ್ಯಾಯಾಲಯವು ಸೂಚಿಸಿ, ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.

ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ), 376, 506, 505 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನು, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್‌), 506, 354ಎ(1)(ii), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೇ, ಬೆಂಗಳೂರಿನ ಸಿಐಡಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್)‌, 376(2)(ಕೆ), 506, 354ಎ(1)(ii), 354(ಬಿ), 354(ಸಿ) ಮತ್ತು ಐಟಿ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಜ್ವಲ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ತಂದೆಯ ಸ್ನೇಹಿತನ ಮಗಳ ಮೇಲೆ ಲವ್! ವಿಶ್ವಕಪ್ ಮುಗಿಯುತ್ತಿದ್ದಂತೆ ಆಕೆಯನ್ನೇ ಪಟಾಯಿಸಿ ವಿವಾಹವಾದ ಭಾರತದ ಸ್ಟಾರ್ ಆರಂಭಿಕ ಕ್ರಿಕೆಟಿಗನೀತ!

ಹಾಸನ ಲೋಕಸಭಾ ಚುನಾವಣೆ ಮುಗಿದ ಬಳಿಕ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದು, ಇಲ್ಲಿಯವರೆಗೂ ದೇಶಕ್ಕೆ ಮರಳಿಲ್ಲ. ಈಚೆಗೆ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿರುವ ಪ್ರಜ್ವಲ್‌ ಮೇ 31ರಂದು ವಿಶೇಷ ತನಿಖಾ ದಳದ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಈ ಮಧ್ಯೆ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News