ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ, 3 ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ!

ಪ್ರವೀಣ್ ಹತ್ಯೆ ಖಂಡಿಸಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Jul 27, 2022, 12:42 PM IST
  • ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿ ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ
  • ಪುತ್ತೂರು, ಸುಳ್ಯ ಮತ್ತು ಕಡಬದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ
  • ಆರೋಪಿಗಳ ಪತ್ತೆಗಾಗಿ 5 ವಿಶೇಷ ತಂಡ ರಚಿಸಿ ಖಾಕಿಪಡೆಯಿಂದ ತಲಾಶ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ, 3 ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ! title=
3 ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ!

ಪುತ್ತೂರು: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ಭುಗಿಲೆದ್ದ ಹಿನ್ನೆಲೆ  ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪುತ್ತೂರು, ಸುಳ್ಯ, ಕಡಬದಲ್ಲಿ ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ  1973 ಕಲಂ 144ರನ್ವಯ ಇಂದು(ಜುಲೈ 27) ಬೆಳಗ್ಗೆ 6 ಗಂಟೆಯಿಂದ ನಾಳೆ(ಜು.28)ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Praveen Nettar Murder: ಹತ್ಯೆ ಖಂಡಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು..?

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಸುಳ್ಯದಲ್ಲಿ ಸಂಘಪರಿವಾರ ಕಾರ್ಯಕರ್ತರು ಅಂಗಡಿ ಮುಂಗಟ್ಟು ಬಂದ್ ಮಾಡುವಂತೆ ಕರೆ ನೀಡಿದ್ದಾರೆ. ಖಾಸಗಿ ಬಸ್ ನಿಲ್ದಾಣ ಬಳಿ ರಸ್ತೆಯಲ್ಲಿ ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಕಾಲ ರಸ್ತೆ ಸಂಚಾರ ಬಂದ್ ಮಾಡಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪ್ರವೀಣ್ ಹತ್ಯೆ ಖಂಡಿಸಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯದ್ದು ಒಂದು ವರ್ಷದ ಸಾಧನೋತ್ಸವ ಅಲ್ಲ, ಭ್ರಷ್ಟೋತ್ಸವ: ಸಿದ್ದರಾಮಯ್ಯ

ಆರೋಪಿಗಳ ಪತ್ತೆಗೆ 5 ತಂಡಗಳ ರಚನೆ

ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಪೊಲೀಸರು 5 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ 3 ಪೊಲೀಸರ ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ತಿಳಿಸಿದ್ದಾರೆ. ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News