ಗಡಿ ವಿವಾದ : ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ವಾದ ಮಂಡಿಸಲು ಸಿದ್ಧತೆ - ಸಿಎಂ ಬೊಮ್ಮಾಯಿ

CM Basavaraj Bommai : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Written by - Prashobh Devanahalli | Edited by - Chetana Devarmani | Last Updated : Nov 24, 2022, 07:09 PM IST
  • ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದ
  • ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಗಡಿ ವಿವಾದ : ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ವಾದ ಮಂಡಿಸಲು ಸಿದ್ಧತೆ - ಸಿಎಂ ಬೊಮ್ಮಾಯಿ title=
ಬಸವರಾಜ ಬೊಮ್ಮಾಯಿ

ಬೆಂಗಳೂರು : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಯವರು ಸಭೆ ನಡೆಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಗಡಿವಿವಾದ ಪ್ರಕರಣವಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ : ಶೂಟಿಂಗ್‌ ವೇಳೆ ಅವಘಡ : ʼಕಾಂತಾರʼ ಕಲಾವಿದ ನವೀನ್‌ ಕಾಲು ಮೂಳೆ ಮುರಿತ..!

ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಅವರು ದಾವೆ ಹೂಡಿದ್ದಾರೆ. ಸರ್ವೋಚ್ಛ ನ್ಯಾಯಾಯಲದಲ್ಲಿ ವಾದ ಮಂಡನೆಯ ನಿರ್ಣಯವನ್ನು ಸರ್ವಪಕ್ಷ ಸಭೆ ಹಾಗೂ ಗಡಿಪ್ರಾಧಿಕಾರದೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಕರ್ನಾಟಕ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸುವುದಾಗಿ ನಿರ್ಧಾರ ಕೈಗೊಂಡಿದೆ ಎಂದರು. ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಿದ್ದು,  ಮಹಾರಾಷ್ಟ್ರ ರಾಜ್ಯದ ಮಾತುಕತೆ ಮೂಲಕ ವಿವಾದ ಬಗೆಹರಿಸುವ ಇಂಗಿತ ಸೇರಿದಂತೆ ಎಲ್ಲ ವಿಷಯಗಳನ್ನು ಸಮಗ್ರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿರುವುದಾಗಿ ತಿಳಿಸಿದರು.

ಗಡಿವಿವಾದವೇ ಮುಗಿದುಹೋಗಿದೆ. ಆದರೆ ಮಹಾರಾಷ್ಟ್ರ ರಾಜ್ಯದವರು ಮತ್ತೆ ವಿವಾದವನ್ನು ಎಬ್ಬಿಸಿದ್ದಾರೆ.  ಗ್ರಾಮಪಂಚಾಯತಿ ನಿರ್ಣಯ ಹಾಗೂ ಪೂರಕ ವರದಿಗಳೆಲ್ಲವೂ ಇದೆ. ಬರುವ ದಿನಗಳಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ರಶ್ಮಿಕಾ ಬಗ್ಗೆ ರಿಷಬ್‌ ಶೆಟ್ಟಿ ಹೇಳಿದ ಮಾತು ಕೇಳಿ ಫ್ಯಾನ್ಸ್‌ ಶಾಕ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News