ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಆಗಮಿಸಲು ಬಿಜೆಪಿ ಶಾಸಕರಿಗೆ ಸೂಚನೆ

ಮತದಾನ ಪ್ರಕ್ರಿಯೆ ಕುರಿತು ಶಾಸಕರಿಗೆ ತರಬೇತಿ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಶನಿವಾರವೇ ಬೆಂಗಳುರಿಗೆ ಆಗಮಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಸೂಷನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

Last Updated : Jul 16, 2022, 12:26 AM IST
ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಆಗಮಿಸಲು ಬಿಜೆಪಿ ಶಾಸಕರಿಗೆ ಸೂಚನೆ  title=

ಬೆಂಗಳೂರು : ಜುಲೈ 18 ಕ್ಕೆ ನಡೆಯುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಿಗೆ ಇಂದು ಸಂಜೆಯೇ ಬೆಂಗಳೂರಿಗೆ ಆಗಮಿಸಲು ಸೂಚಿಸಲಾಗಿದ್ದು, ನಗರದ ಖಾಸಗಿ ಹೋಟೆಲ್ ನಲ್ಲಿ ಎಲ್ಲ ಶಾಸಕರನ್ನು ಒಂದೆಡೆ ಸೇರಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಮತದಾನ ಪ್ರಕ್ರಿಯೆ ಕುರಿತು ಶಾಸಕರಿಗೆ ತರಬೇತಿ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಶನಿವಾರವೇ ಬೆಂಗಳುರಿಗೆ ಆಗಮಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಸೂಷನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ: 'ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?'

ರಾಷ್ಟ್ರಪತಿ ಚುನಾವಣೆಗೆ ಗೌಪ್ಯ ಮತದಾನಕ್ಕೆ ಅವಕಾಶ ಇರುವುದರಿಂದ ಅಧಿಕೃತ ವಿಪ್ ಜಾರಿ ಮಾಡಲು ಅವಕಾಶವಿಲ್ಲ ಎನ್ನಲಾಗಿದ್ದು, ಹೀಗಾಗಿ ಈ ಸಂದರ್ಭದಲ್ಲಿ ಬಿಜೆಪಿ ಶಾಸಕರ ಮತಗಳು ಅಸಿಂಧು ಆಗದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರು ಈ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News