ವಂದೇ ಭಾರತ್‌ಗೆ ಸೆ.16ಕ್ಕೆ ಪ್ರಧಾನಿ ಮೋದಿ ಚಾಲನೆ : ಹುಬ್ಬಳ್ಳಿ-ಪುಣೆ ನೇರ ಸಂಚಾರ

ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Prashobh Devanahalli | Edited by - Krishna N K | Last Updated : Sep 12, 2024, 10:00 PM IST
    • ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ
    • ಸೋಮವಾರದಂದು ಪುಣೆಯಿಂದ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ
    • ಕೊಲ್ಲಾಪುರ ಮೂಲಕ ಸಂಚರಿಸಲ್ಲ: ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದೆ
ವಂದೇ ಭಾರತ್‌ಗೆ ಸೆ.16ಕ್ಕೆ ಪ್ರಧಾನಿ ಮೋದಿ ಚಾಲನೆ : ಹುಬ್ಬಳ್ಳಿ-ಪುಣೆ ನೇರ ಸಂಚಾರ title=

ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18ರಿಂದ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಸರ್ಕಾರ ಚಿಂತನೆ: ಸಚಿವ ಸಂತೋಷ ಲಾಡ್

ಹುಬ್ಬಳ್ಳಿಯಿಂದ ವಾರದಲ್ಲಿ 3 ದಿನ: ವಾರದಲ್ಲಿ ಮೂರು ಬಾರಿ ಬುಧವಾರ, ಶುಕ್ರವಾರ, ರವಿವಾರ ಹುಬ್ಬಳ್ಳಿಯಿಂದ ಹಾಗೂ ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ. ಕೊಲ್ಲಾಪುರ ಮೂಲಕ ಸಂಚರಿಸಲ್ಲ: ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೋಲ್ಹಾಪುರ ಮೂಲಕ ಸಂಚರಿಸುವುದಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಈ ರೈಲುನ್ನು ಪ್ರತಿ ದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ. ಇದಕ್ಕಾಗಿ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ:ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾಳೆ ಭೇಟಿ

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ  ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಾಹತುಗಳಿಗೆ ಅನಕೂಲವಾಗಲಿದೆ. ಅಲ್ಲದೇ, ಮುಂಬೈ ಸಂಪರ್ಕಕ್ಕೆ ಈ ಮಾರ್ಗ  ಪ್ರಮುಖವಾಗಲಿದೆ ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News