ಏಪ್ರಿಲ್ ಕೊನೆಯ ವಾರದಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ರಾಜ್ಯಾದ್ಯಂತ 16 ಬಹಿರಂಗ ಸಮಾವೇಶಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ.

Last Updated : Apr 11, 2018, 02:28 PM IST
ಏಪ್ರಿಲ್ ಕೊನೆಯ ವಾರದಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ title=

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ ಕೊನೆಯವಾರದಲ್ಲಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 'ಸೀದಾ ರುಪಯ್ಯ ಸರಕಾರ್, ಕಮೀಷನ್ ಸರಕಾರ್'ಗಳಂಥ ಜನಪ್ರಿಯ ಹೇಳಿಕೆಗಳನ್ನು ನೀಡಿದ್ದ ಪ್ರಧಾನಿ ಮೋದಿ, ರಾಜ್ಯಾದ್ಯಂತ 16 ಬಹಿರಂಗ ಸಮಾವೇಶ ಹಾಗೂ ಮೂರು ರೋಡ್ ಶೋ ಗಳಲ್ಲಿ ಭಾಗವಹಿಸಲಿದ್ದಾರೆ.

ಸಮಾವೇಶ ನಡೆಯುವ ಸ್ಥಳ, ದಿನಾಂಕಗಳ ನಿಗದಿ, ಭಾಷಣಗಳನ್ನು ಸಿದ್ಧಪಡಿಸುವ ಕಾರ್ಯಗಳಲ್ಲಿ ಮುಳುಗಿರುವ ಬಿಜೆಪಿ ನಾಯಕರು ಶೀಘ್ರದಲ್ಲೇ ಈ ಮೋದಿ ಚುನಾವಣಾ ಪ್ರಚಾರದ ದಿನಾಂಕ ಘೋಷಿಸುವ ಸಾಧ್ಯತೆ ಇದೆ.

Trending News