B Sriramulu : ಖಾಸಗಿ ಬಸ್ ದರ ದುಪ್ಪಟ್ಟು : ಮಾಲೀಕರಿಗೆ ಎಚ್ಚರಿಕೆ ನೀಡಿದ ಸಚಿವ ಶ್ರೀರಾಮುಲು

ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ವಸೂಲಿ ಆರೋಪ ಹಿನ್ನೆಲೆ ಸಾರಿಗೆ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

Written by - Channabasava A Kashinakunti | Last Updated : Aug 28, 2022, 02:54 PM IST
  • ಖಾಸಗಿ ಬಸ್ ಮಾಲೀಕರಿಂದ ದರ ದುಪ್ಪಟ್ಟು
  • ದುಪ್ಪಟ್ಟು ಟಿಕೆಟ್ ವಸೂಲಿ ಆರೋಪ
  • ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ
B Sriramulu : ಖಾಸಗಿ ಬಸ್ ದರ ದುಪ್ಪಟ್ಟು : ಮಾಲೀಕರಿಗೆ ಎಚ್ಚರಿಕೆ ನೀಡಿದ ಸಚಿವ ಶ್ರೀರಾಮುಲು title=

ಬೆಂಗಳೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ವಸೂಲಿ ಆರೋಪ ಹಿನ್ನೆಲೆ ಸಾರಿಗೆ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

 ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸಚಿವ  ಶ್ರೀರಾಮುಲು, ಗೌರಿ ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಲವು ಧನದಾಹಿ ಖಾಸಗಿ ಬಸ್ ಗಳು ನಿಗಧಿತ ದರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಇದನ್ನೂ ಓದಿ : Bangalore : ಬುಡುಬುಡಿಕೆಯವನ ಮಾತು ಕೇಳಿ ಚಿನ್ನಾಭರಣ ಕಳೆದುಕೊಂಡ ದಂಪತಿ

ಖಾಸಗಿ ಬಸ್ ಗಳು ರೂಟ್ ಗೆ ನಿಗಧಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಯಾರಾದರೂ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು.

ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ  ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಏಕೈಕ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ : Talikoti : ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳದ ಭೂಮಿಪೂಜಾದಲ್ಲಿ ಸಾವರ್ಕರ್ ಪೋಟೋ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News