ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ

Priyank Kharge: ಬಿಜೆಪಿ ವಿರುದ್ಧ ಸ್ವಪಕ್ಷದ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಿನ್ನೆ ತಾನೇ ಕೋವಿಡ್‌ ಸಮಯದಲ್ಲಿ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ..  

Written by - Savita M B | Last Updated : Dec 27, 2023, 05:46 PM IST
  • ಕಾಂಗ್ರೆಸ್‌ ನಾಯಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಭ್ರಷ್ಟಾಚಾರಗಳು ನಡೆದಿವೆ ಎನ್ನುತ್ತಿದ್ದಾರೆ
  • ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಪ್ರಿಯಾಂಕ್‌ ಖರ್ಗೆ
  • ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ಸಾಲು ಸಾಲು ಆರೋಪ ಮಾಡುವ ಮೂಲಕ ಕಿಡಿಕಾರಿದ್ದಾರೆ
ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ  title=

BJP-Congress: ಇದೇ ಅಸ್ತ್ರವಾಗಿ ಬಳಸಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಭ್ರಷ್ಟಾಚಾರಗಳು ನಡೆದಿವೆ ಎನ್ನುತ್ತಿದ್ದಾರೆ.. ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ಸಾಲು ಸಾಲು ಆರೋಪ ಮಾಡುವ ಮೂಲಕ ಕಿಡಿಕಾರಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆಯೂ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಎನ್ನಲಿ, ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ. ಸರ್ಕಾರಗಳು ನಡೆಯೋದು ಸಂವಿಧಾನದ ಮೇಲೆ ಎಂದು ತಿಳಿಸಿದರು. 

ಇದನ್ನೂ ಓದಿ-ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಸವ ತತ್ವ, ಅಂಬೇಡ್ಕರ್ ತತ್ವದ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು. ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್‌ಎಸ್‌ಎಸ್‌ನವರು ಎಂದಿದ್ದರು. ಬಿಜೆಪಿಯವರು ಹಣದ ಮೇಲೆ ಹೆಣ ಮಾಡಿದ್ದಾರೆ. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೂ ಹಣ ಮಾಡಿದ್ದಾರೆ ಎಂದು ಆರೋಪಿಸಿದರು.
ಯತ್ನಾಳ್ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು. ವಿಜಯೇಂದ್ರ, ಯತೀಂದ್ರ ಮೇಲೆ ಶ್ಯಾಡೋ ಸಿಎಂ ಅಂತಾ ಆರೋಪ ಮಾಡಿದ್ರು. 

ಕಳೆದ ಸರ್ಕಾರದಲ್ಲಿ ಶ್ಯಾಡೋ ಸಿಎಂ ಯಾರಿದ್ರು. ಯತ್ನಾಳ್ ದಾಖಲೆ ಬಿಡುಗಡೆ ಮಾಡ್ತೀವಿ ಅಂತಾರೆ. ಯತ್ನಾಳ್ ಅವರಲ್ಲಿ ನಾನು ಕರ್ನಾಟಕ ಜನರ ಪರ ಮನವಿ ಮಾಡ್ತೀನಿ. ನೀವು ದಾಖಲೆ ಕೊಡಿ. ನೀವು ಪ್ರಮಾಣಿಕರು ಅಂತಾ ಗೊತ್ತಿದೆ. ಯಾವುದೇ ದಾಖಲೆ ಇದ್ರೂ ಕೊಡಿ ಎಂದರು. 

ಇದನ್ನೂ ಓದಿ-ಕನ್ನಡ ಬದ್ದತೆಯ ಹರಿಕಾರ ನಾರಾಯಣ ಗೌಡರು: ನಾಡೋಜ ಡಾ.ಮಹೇಶ ಜೋಶಿ 

40 ಸಾವಿರ ಕೋಟಿ ಹಗರಣ ಆಗಿದೆ. ಹೆಣದ ಮೇಲೆ ಹಣ ಮಾಡಿದ್ದಾರೆ ಎಂದ್ರೆ ಮನುಷ್ಯತ್ವ ಅಲ್ಲ. ಇದು ಕಾಂಗ್ರೆಸ್ ನಾಯಕರ ಆರೋಪ ಅಲ್ಲ. ಮಾಜಿ ಕೇಂದ್ರ ಸಚಿವರಿಂದ ಹಾಲಿ ಶಾಸಕರ ಮೇಲೆ ಆರೋಪ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉತ್ತರ ಕೊಡಬೇಕು. ಕೋವಿಡ್ ಭ್ರಷ್ಟಾಚಾರದಲ್ಲಿ ಕೇಂದ್ರಕ್ಕೂ ಪಾಲು ಹೋಗಿರಬಹುದು. 40 ಪರ್ಸೆಂಟ್ ಸರ್ಕಾರ ಬಿರುದು ಬಂದಿರೋದು ಬಿಜೆಪಿಯವರಿಂದ. ಕೇಂದ್ರ ನಾಯಕರು, ರಾಜ್ಯ ನಾಯಕರಿಗೂ ಪಾಲು ಹೋಗಿದೆ ಎಂದು ಗಂಭೀರ ಆರೋಪ ಮಾಡಿದರು.

ಬ್ರಿಟಿಷರ ಬೂಟು ನೆಕ್ಕೋರು ಅನ್ನೋ ಹರಿಪ್ರಸಾದ್ ಹೇಳಿಕೆಗೆ ಖರ್ಗೆ ಪ್ರತಿಕ್ರಿಯಿಸಿ, ಅದರಲ್ಲಿ ತಪ್ಪೇನಿದೆ? ಕ್ಷಮಾ ಪತ್ರ ಬರೆದಿದ್ದು ಯಾರು? ಬ್ರಿಟಿಷರ ಬಳಿ ಪೆನ್ಶನ್ ತಗೊಂಡಿದ್ದು ಯಾರು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸ್ವಂತ ಇತಿಹಾಸ ಇಲ್ಲ. ಸ್ವಾತಂತ್ರ‍್ಯ ಹೋರಾಟದಲ್ಲಿ ಅವರ ಕೊಡುಗೆ ಇಲ್ಲ. ಅವರು ಸೃಷ್ಟಿಸಬೇಕಾಗಿದೆ. ಹಾಗಾಗಿ ವಾಟ್ಸಪ್ ಯೂನಿವರ್ಸಿಟಿಯಲ್ಲಿ ಸುಳ್ಳು ಹಬ್ಬಿಸ್ತಾರೆ. ಅದನ್ನೇ ಯುವಕರು ನಂಬುತ್ತಾರೆ ಎಂದು ಟೀಕಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News