ಒಂದೇ ಒಂದು ದಿನ ಮಣ್ಣು ಹೊತ್ತರೆ ಆರಗ ಜ್ಞಾನೇಂದ್ರರ ಮೈಬಣ್ಣವೂ ಕಪ್ಪಾಗುತ್ತದೆ: ಪ್ರಿಯಾಂಕ್ ಖರ್ಗೆ

ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

Written by - Puttaraj K Alur | Last Updated : Aug 3, 2023, 01:46 PM IST
  • ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ಅವಹೇಳನ ಮಾಡಿದ ಆರಗ ಜ್ಞಾನೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು
  • ಆರಗ ಜ್ಞಾನೇಂದ್ರ ಆಡಿರುವ ಮಾತು ಬರೀ ಅವರ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು
  • ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲವೆಂದು ಆಕ್ರೋಶ
ಒಂದೇ ಒಂದು ದಿನ ಮಣ್ಣು ಹೊತ್ತರೆ ಆರಗ ಜ್ಞಾನೇಂದ್ರರ ಮೈಬಣ್ಣವೂ ಕಪ್ಪಾಗುತ್ತದೆ: ಪ್ರಿಯಾಂಕ್ ಖರ್ಗೆ  title=
ಆರಗ ಜ್ಞಾನೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು   

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮೈಬಣ್ಣವನ್ನು ಅವಹೇಳನ ಮಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಗುರುವಾರ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಆರಗ ಜ್ಞಾನೇಂದ್ರ ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಾನೆತ್ತರಕ್ಕೆ ಗರಿಬಿಚ್ಚಿ ಹಾರಿದ ನವಿಲಿನ ಅಪರೂಪದ ವಿಡಿಯೋ ನೋಡಿ

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಕೈ ಕಮಾಲ್

BJP Karnatakaದ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲವೆಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News