ರಾಜ್ಯದ ಹಿತವನ್ನು ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ  ಪ್ರತಿಭಟನೆ ಹಮ್ಮಿಕೊಳ್ಳಾಗಿದೆ.  ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

Written by - Ranjitha R K | Last Updated : Feb 5, 2024, 03:49 PM IST
  • ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ರಾಜ್ಯದ ಬಿಜೆಪಿ ಸಂಸದರು, ಶಾಸಕರು, ನಾಯಕರಿಗೂ ಆಹ್ವಾನ.
  • ಕರ್ನಾಟಕ ರಾಜ್ಯದ ಹಕ್ಕುಗಳ ಪರ ದ್ವನಿ ಎತ್ತಲು ಬನ್ನಿ: ಸಿದ್ದರಾಮಯ್ಯ ಕರೆ
  • ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದ ಹಿತವನ್ನು ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು : ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ  ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹೋರಾಟಕ್ಕೆ ಜೊತೆ ನೀಡಲು  ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ ಎದ್ನು ಹೇಳಿದ್ದಾರೆ.  ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ  ಪ್ರತಿಭಟನೆ ಹಮ್ಮಿಕೊಳ್ಳಾಗಿದೆ. 

ರಾಜ್ಯಕ್ಕೆ ನಿರಂತರ ಅನ್ಯಾಯ :
ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ  ಹಣವೂ ಬಂದಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ಸಮಯದಲ್ಲಿ ತೋರಿರುವ ಮಲತಾಯಿ ಧೋರಣೆಯನ್ನು ವಿದ್ರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ. 

ಇದನ್ನೂ ಓದಿ : ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನುದಾನ ಅನ್ಯಾಯವಾಗಿಲ್ಲ

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ:
14 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ.ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳು  ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

GST ನಲ್ಲಿ ರಾಜ್ಯಕ್ಕೆ ಅನ್ಯಾಯ : 
GST ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ 15% ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡ್ತಾ ಇಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ. ಹೀಗಾಗಿ ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : ಜೀ ಕನ್ನಡ ಸ್ಟುಡಿಯೋದಲ್ಲಿ ಕಣ್ಣು ಮುಚ್ಚಿ ಓದುವ ಕಲೆ ಸತ್ಯವನ್ನು ಲೈವ್‌ ಟೆಸ್ಟ್‌ನಲ್ಲೇ ನೋಡಿ!

ರಾಜ್ಯದಿಂದ ನಾವು ಕೊಡುವ 100 ರೂ. ಗಳಲ್ಲಿ 12 ರೂ. ಮಾತ್ರ ನಮಗೆ ವಾಪಾಸ್ ಬರತ್ತೆ. ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ 4,30,000 ಕೋಟಿ ತೆರಿಗೆ ವಸೂಲಿ ಆಗಿ ಹೋಗುತ್ತಿದೆ. ತೆರಿಗೆ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ಬಿಟ್ಟರೆ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮಗೆ ಈ ವರ್ಷ ತೆರಿಗೆ ಪಾಲಿನಲ್ಲಿ 37, 252 ಕೋಟಿ ಬರುವುದು. ಕೇಂದ್ರ ಪುರಸ್ಕ್ರುತ ಯೋಜನೆಯಲ್ಲಿ 13,005 ಕೋಟಿ  ಎರಡೂ ಸೇರಿ ಕೇವಲ 50,257 ಕೋಟಿ  ರಾಜ್ಯಕ್ಕೆ ಬಂದಿದೆ. ರಾಜ್ಯಕ್ಕೆ ಇದು ಭೀಕರ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದರು. 

ನೀರಾವರಿ ಯೋಜನೆಗಳಲ್ಲೂ ಭೀಕರ ಅನ್ಯಾಯ ಒತ್ತಾಯ : 
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು  ತಿಳಿಸಿದ್ದರು. ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸುವಾಗ ಇದನ್ನೇ ಪುನಃ ನೀರಾವರಿ ಯೋಜನೆಯ ಅನುದಾನ ಎಂದು ಉಲ್ಲೇಖಿಸಿದ್ದರು. 2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದು. ಆದರೆ ಇದುವರೆಗೂ ಒಂದೇ ಒಂದು ರೂ.ಬಂದಿಲ್ಲ . ಈಗಲಾದರೂ ಬಿಡುಗಡೆ ಮಾಡಿ ಎಂದು ನಾನು ಒತ್ತಾಯಿಸುತ್ತೇನೆ ಎಂದರು. 

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ ಎಂದರು.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ ಎಂದರು. 

ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು : 
ಕೇಂದ್ರ ಸರ್ಕಾರ 2021 ರಲ್ಲಿ  ಪ್ರವಾಹ ಬಂದಾಗಲೂ ಅಗತ್ಯ ಹಣ ಕೊಟ್ಟಿಲ್ಲ.  ಪರಿಹಾರ ಹಂಚಿಕೆ ಮಾಡುವಾಗ 6 ಮಾನದಂಡಗಳಾದ ಜನಸಂಖ್ಯೆ, ವಿಸ್ತೀರ್ಣ, ವರಮಾನದ ಅಂತರ, ಅರಣ್ಯ ಪ್ರದೇಶ, ತೆರಿಗೆ ಹಣಕಾಸಿನ ಪರಿಸ್ಥಿತಿಗಳನ್ನು ಪರಿಗಣಿಸುತ್ತಾರೆ. ಈ ಮಾನದಂಡಗಳ ಪ್ರಕಾರವೂ ನಮಗೆ ಪರಿಹಾರದ ಹಣ ಬಂದಿಲ್ಲ.  ನಮ್ಮ ರಾಜ್ಯಕ್ಕೆ ಅನ್ಯಾಯವಾಗಬಾರದು. ಪತ್ರ ಬರೆದರೆ ಉತ್ತರ ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ.ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ  ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದರು.

ಪ್ರತಿಭಟನೆಗೆ ಪ್ರತಿಪಕ್ಷದವರಿಗೂ ಕರೆ :
ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿ ಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ , ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದಿದ್ದರೆ ಕನ್ನಡಿಗರಿಗೆ ದ್ರೋಹ ಉಂಟಾಗಲಿದೆ ಎಂದರು

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಹೋಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕೆ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿ ಬರಲಿರುವ ಅಧಿವೇಶನದಲ್ಲಿ ಶ್ವೇತ ಪತ್ರ ಹೊರಡಿಸಲು ರಾಜ್ಯ ಸರ್ಕಾರದ ಚಿಂತನೆ ಸರ್ಕಾರ ನಡೆಸಿದೆ ಎಂದು ಹೇಳಿದರು.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News