PSI recruitment scam: ಆರ್‌.ಡಿ.ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು!

Karnataka PSI recruitment scam: ಕಲಬುರಗಿ ನಗರದ ಅಶೋಕ್ ನಗರ ಠಾಣೆಯಲ್ಲಿ ೫, ಸ್ಟೆಷನ್ ಬಜಾರ್ ಠಾಣೆಯಲ್ಲಿ ೨, ಚೌಕ್ ಠಾಣೆಯಲ್ಲಿ, ಧಾರವಾಡದ ಸಬ್ ಅರ್ಬನ್, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಎಫ್‍ಐಆರ್ ಮತ್ತು ಆರೋಪ ಪಟ್ಟಿಯನ್ನು ಒಟ್ಟಾಗಿಸಬೇಕು ಎಂದು ಆರ್.ಡಿ.ಪಾಟೀಲ್ ಮನವಿ ಮಾಡಿದ್ದ. ​

Written by - Puttaraj K Alur | Last Updated : Dec 9, 2023, 11:01 AM IST
  • 545 ಪಿಎಸ್​ಐ ಹುದ್ದೆಗಳ ಬಹುದೊಡ್ಡ ಹಗರಣ ಪ್ರಕರಣ
  • ಆರ್‌.ಡಿ.ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
  • ಆರ್‌.ಡಿ.ಪಾಟೀಲ್‌ಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
PSI recruitment scam: ಆರ್‌.ಡಿ.ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು! title=
ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್! 

ಬೆಂಗಳೂರು: ೫೪೫ ಪಿಎಸ್​ಐ ಹುದ್ದೆಗಳ  ಬಹುದೊಡ್ಡ ಹಗರಣ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಆರ್‌.ಡಿ.ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಇದರಿಂದ ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯದೆಲ್ಲೆಡೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನ ವೀಲಿನಗೊಳಿಸಿ, ಒಂದೇ ಕಡೆ ವಿಚಾರಣೆ ನಡೆಸಲು ಆರ್‌.ಡಿ.ಪಾಟೀಲ್ ಮನವಿ ಮಾಡಿದ್ದ. ಅಲ್ಲಿವರೆಗೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಪಡೆದಿದ್ದ. ಇದೀಗ ಆರ್‌.ಡಿ.ಪಾಟೀಲ್‌ಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ಎಲ್ಲಾ ಎಫ್‌ಐಆರ್‌ಗಳಿಗೆ ದಾಖಲಾದ ಪ್ರಕರಣಗಳನ್ನ ಒಂದೇ ಕಡೆ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಕಿಂಗ್‌ಪಿನ್ ಆರ್‌.ಡಿ.ಪಾಟೀಲ್ ಮೇಲ್ಮನವಿಗೆ ಹೈಕೋರ್ಟ್ ಪೀಠ ಪ್ರತಿಕ್ರಿಯೆ ನೀಡಿದೆ. ಸದ್ಯ ತಡೆಯಾಜ್ಞೆ ತೆರವು ಹಿನ್ನಲೆ ಪಿಎಸ್​ಐ ಕೇಸ್‌ನಲ್ಲೂ ಆರೋಪಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಆರ್.ಡಿ.ಪಾಟೀಲ್ ಕೆಇಎ ಪರೀಕ್ಷಾ ಅಕ್ರಮದ ವಿಚಾರಣೆ ಎದುರಿಸುತ್ತಿದ್ದಾನೆ. ಕಲಬುರಗಿ, ಬೆಂಗಳೂರು, ಧಾರವಾಡ ಮತ್ತು ತುಮಕೂರಿನ ವಿವಿಧ ಠಾಣೆಗಳಲ್ಲಿ ವಿವಿಧ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪ್ರತ್ಯೇಕವಾಗಿ  11 ಎಫ್‍ಐಆರ್‌ಗಳು ದಾಖಲಾಗಿವೆ. 

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯ ವ್ಯವಸ್ಥೆಯ ಅರಿವು ಮುಖ್ಯ- ಸಚಿವ ಸಂತೋಷ ಲಾಡ್

ಹಾಗೆ ಆರೋಪ ಪಟ್ಟಿ ಒಟ್ಟಾಗಿಸುವಂತೆ ಕೋರಿ ಆರ್.ಡಿ.ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿ ಕೆ.ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ. ಆರ್.ಡಿ.ಪಾಟೀಲ್ ವಿರುದ್ಧದ ಎಫ್‍ಐಆರ್‌ಗಳಿಗೆ ತಡೆಯಾಜ್ಞೆ ವಿಧಿಸಿ ಹೈಕೋರ್ಟ್ 2023ರ ಏಪ್ರಿಲ್‌ 17ರಂದು ಮಾಡಿದ್ದ ಮಧ್ಯಂತರ ಆದೇಶವು ತೆರವಾಗಿದೆ. 

ಕಲಬುರಗಿ ನಗರದ ಅಶೋಕ್ ನಗರ ಠಾಣೆಯಲ್ಲಿ ೫, ಸ್ಟೆಷನ್ ಬಜಾರ್ ಠಾಣೆಯಲ್ಲಿ ೨, ಚೌಕ್ ಠಾಣೆಯಲ್ಲಿ, ಧಾರವಾಡದ ಸಬ್ ಅರ್ಬನ್, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಎಫ್‍ಐಆರ್ ಮತ್ತು ಆರೋಪ ಪಟ್ಟಿಯನ್ನು ಒಟ್ಟಾಗಿಸಬೇಕು ಎಂದು ಆರ್.ಡಿ ಪಾಟೀಲ್ ಮನವಿ ಮಾಡಿದ್ದ. ಇದೀಗ ಆರ್‌.ಡಿ.ಪಾಟೀಲ್‌ಗೆ ನೀಡಲಾಗಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದೆ. ಇದರಿಂದ ಪ್ರಕರಣ ಕಿಂಗ್‌ಪಿನ್‌ಗೆ ದೊಡ್ಡ ಸಂಕಷ್ಟ ಎದುರಾದಂತಾಗಿದೆ.

ಇದನ್ನೂ ಓದಿ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News