ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ

ಮಾದರಿ ಹಾಗೂ ವಿಶಿಷ್ಟ  ಕಾರ್ಯಾಚರಣೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಲಾ 20 ಮನೆಗಳಂತೆ ಗುಣಾತ್ಮಕವಾಗಿ ಸುಮಾರು1200 ಹೆಚ್ಚು ಮನೆಗಳಿಗೆ ಆಶ್ರಿತ ರೋಗವಾಹಕ ರೋಗಗಳ ಕುರಿತ ಕರಪತ್ರಗಳನ್ನು ಹಂಚಿ, ಜನತೆಗೆ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಜಾಗೃತಿ ಮೂಡಿಸಲಾಯಿತು.

Written by - Manjunath Hosahalli | Last Updated : Jun 12, 2024, 06:22 PM IST
    • ಪ್ರೌಢಶಾಲಾ ಮಕ್ಕಳ ನೆರವಿನಿಂದ ಜನ ಜಾಗೃತಿ ಜಾಥಾ
    • ಜಾಥಾದೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಕಾರ್ಯಾಚರಣೆ
    • ಮಾದರಿ ಹಾಗೂ ವಿಶಿಷ್ಟ ಕಾರ್ಯಾಚರಣೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಭಾಗಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ title=
File Photo

Bengaluru Laterst News: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ಕೃಷ್ಣರಾಜಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಿ.ನಾರಾಯಣಪುರ ಸರ್ಕಾರಿ ಪ್ರೌಢಶಾಲೆಯ ಸಹಯೋಗದೊಂದಿಗೆ ಆಡಳಿತ ವೈದ್ಯಾದಿಕಾರಿಗಳಾದ ಡಾ. ಬಾಬು ಮಹೇಂದ್ರ ಪ್ರಸಾದ್’ರವರ ನಿರ್ದೇಶನದಂತೆ  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುರಾಜ್‍ ನೇತೃತ್ವದಲ್ಲಿ ಪ್ರೌಢಶಾಲಾ ಮಕ್ಕಳ ನೆರವಿನಿಂದ ಜನ ಜಾಗೃತಿ ಜಾಥಾದೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ!

ಮಾದರಿ ಹಾಗೂ ವಿಶಿಷ್ಟ  ಕಾರ್ಯಾಚರಣೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಲಾ 20 ಮನೆಗಳಂತೆ ಗುಣಾತ್ಮಕವಾಗಿ ಸುಮಾರು1200 ಹೆಚ್ಚು ಮನೆಗಳಿಗೆ ಆಶ್ರಿತ ರೋಗವಾಹಕ ರೋಗಗಳ ಕುರಿತ ಕರಪತ್ರಗಳನ್ನು ಹಂಚಿ, ಜನತೆಗೆ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: ಇವರೇ ನೋಡಿ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಪತ್ನಿ! ಈಕೆ ವೈದ್ಯೆಯೂ… ಖ್ಯಾತ ನೃತ್ಯಗಾರ್ತಿಯೂ ಹೌದು

ಇದೇ ಸಂದರ್ಭದಲ್ಲಿ ಕೃಷ್ಣರಾಜಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಶೈಲ್ ಕನ್ನಾಳ್ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಕುರಿತಾದ ಆರೋಗ್ಯ ಶಿಕ್ಷಣವನ್ನು ನೀಡಿದರು. ಆರೋಗ್ಯನಿರೀಕ್ಷಣಾಧಿಕಾರಿಗಳಾದ ಮಂಜುನಾಥ, ಕಿರಣ್, ಶರತ್, ಶಿವಣ್ಣ ಸೇರಿದಂತೆ ಆಶಾ ಕಾರ್ಯಕರ್ತೆಯರು ಶಾಲಾ ಮಕ್ಕಳ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ತಂಡದ ಕಾರ್ಯವೈಖರಿಯ ಮೇಲ್ವಿಚಾರಣೆಯನ್ನು ಮಾಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News