ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2017-18ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ(ಏಪ್ರಿಲ್ 30) ಪ್ರಕಟವಾಗಲಿದೆ.

Last Updated : Apr 29, 2018, 12:40 PM IST
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ title=

ಬೆಂಗಳೂರು : ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2017-18ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ(ಏಪ್ರಿಲ್ 30) ಪ್ರಕಟವಾಗಲಿದೆ.

ಈ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ಏ.30ರಂದು ಬೆಳಿಗ್ಗೆ 11ಗಂಟೆಗೆ ಇಲಾಖೆಯ ವೆಬ್ಸೈಟ್ www.pue.kar.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಮೇ.1ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. 

ಈ ಬಾರಿ ಪರೀಕ್ಷೆಯಲ್ಲಿ ಸುಮಾರು 6,90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2.73 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಫಲಿತಾಂಶ ಪ್ರಕಟಗೊಂಡ ನಂತರ ಉತ್ತರ ಪತ್ರಿಕೆಗಳ ಸ್ಕ್ಯಾ‌ನ್ಡ್‌ ಕಾಪಿ ಪಡೆಯಲು, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. 

ಮಾರ್ಚ್ 1 ರಿಂದ 17ರವರೆಗೆ ರಾಜ್ಯಾದ್ಯಂತ 2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

Trending News