ICC World Cup 2023: ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಕ್ವಿಂಟನ್ ಡಿಕಾಕ್!

Quinton De Kock Retirement: ಕ್ವಿಂಟನ್‌ ಡಿಕಾಕ್ ಇದುವರೆಗೆ 140 ಏಕದಿನ ಮತ್ತು 80 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಈ 2 ಮಾದರಿಗಳಲ್ಲಿ ಕ್ರಮವಾಗಿ 5,966 ಹಾಗೂ 2,277 ರನ್‌ ಗಳಿಸಿದ್ದಾರೆ.

Written by - Prashobh Devanahalli | Last Updated : Sep 5, 2023, 11:15 PM IST
  • ಏಕದಿನ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್‌ಕೀಪರ್‌ ಬ್ಯಾಟ್ಸ್ಮನ್‍ ಕ್ವಿಂಟನ್‌ ಡಿಕಾಕ್‌
  • ಮುಂಬರುವ ವಿಶ್ವಕಪ್‌ ಟೂರ್ನಿ ಬಳಿಕ ಡಿಕಾಕ್ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳಲಿದ್ದಾರೆ
  • ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡ ಪ್ರಕಟಿಸಿದ ಬೆನ್ನಲ್ಲೇ ನಿರ್ಧಾರ ಪ್ರಕಟಿಸಿದ ಡಿಕಾಕ್
ICC World Cup 2023: ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಕ್ವಿಂಟನ್ ಡಿಕಾಕ್! title=
ಏಕದಿನ ಕ್ರಿಕೆಟ್‍ಗೆ ಡಿಕಾಕ್ ನಿವೃತ್ತಿ!

ನವದೆಹಲಿ: ದಕ್ಷಿಣ ಆಫ್ರಿಕಾದ ವಿಕೆಟ್‌ಕೀಪರ್‌ ಬ್ಯಾಟ್ಸ್‍ಮನ್‍ ಕ್ವಿಂಟನ್‌ ಡಿಕಾಕ್‌ ಏಕದಿನ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ವಿಶ್ವಕಪ್‌ ಟೂರ್ನಿ ಬಳಿಕ  ಅವರು ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳಲಿದ್ದಾರೆ. ಡಿಕಾಕ್‌ ಅವರ ನಿವೃತ್ತಿ ನಿರ್ಧಾರವನ್ನು ಮಂಗಳವಾರ ಕ್ರಿಕೆಟ್‌ ದಕ್ಷಿಣ ಆಫ್ರಿಕಾ (CSA) ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.  

ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇದರ ಬೆನ್ನಲ್ಲಿಯೇ ಡಿಕಾಕ್‌ ಅವರು ತಮ್ಮ ನಿವೃತ್ತಿ ನಿರ್ಧಾರವನ್ನು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವನ್ನು ತೆಂಬಾ ಬವುಮಾ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: World Cup 2023: ವಿಶ್ವಕಪ್’ಗೆ 15 ಸದಸ್ಯರ ಭಾರತ ತಂಡ ಪ್ರಕಟ: ಉಪನಾಯನಾಗಿ ಆಲ್’ರೌಂಡರ್’ಗೆ ಸ್ಥಾನ

30 ವರ್ಷದ ಡಿಕಾಕ್‌ 2021ರ ಡಿಸೆಂಬರ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಪ್ರಕಟಿಸಿ ಅಚ್ಚರಿ ಮೂಡಿಸಿದ್ದರು. ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಂಡದ್ದಾಗಿ ಅವರು ಹೇಳಿದ್ದರು. 54 ಟೆಸ್ಟ್‌ಗಳನ್ನು ಆಡಿರುವ ಡಿಕಾಕ್ 3,300 ರನ್‌ ಗಳಿಸಿದ್ದಾರೆ.

ಡಿಕಾಕ್ ಇದುವರೆಗೆ 140 ಏಕದಿನ ಮತ್ತು 80 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಈ 2 ಮಾದರಿಗಳಲ್ಲಿ ಕ್ರಮವಾಗಿ 5,966 ಹಾಗೂ 2,277 ರನ್‌ ಗಳಿಸಿದ್ದಾರೆ. ಡಿಕಾಕ್ ಐಪಿಎಲ್ ಟೂರ್ನಿಗಳಲ್ಲಿಯೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕವೂ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಭಾರತ ತಂಡದ ಜರ್ಸಿ ಮೇಲೆ ‘ಇಂಡಿಯಾ’ ಬದಲು ‘ಭಾರತ್’ ಎಂದು ಮುದ್ರಿಸಿ: BCCIಗೆ ಸೆಹ್ವಾಗ್ ಸಲಹೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News