ಬೆಂಗಳೂರು: ಬಹುನಿರೀಕ್ಷಿತ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ಎಚ್. ನಾಗೇಶ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲ ಪಕ್ಷೇತರ ಶಾಸಕರಾದ ರಾಣಿಬೆನ್ನೂರಿನ ಶಾಸಕ ಆರ್.ಶಂಕರ್ ಹಾಗೂ ಮುಳಬಾಗಿಲಿನ ನಾಗೇಶ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ರಾಜಭವನದಲ್ಲಿ ಇಂದು ರಾಜ್ಯಪಾಲರಾದ ವಜುಭಾಯಿ ರೂಢಭಾಯಿವಾಲಾ ಅವರು ಮಂತ್ರಿಮಂಡಲದ ನೂತನ ಸದಸ್ಯರಾದ ಆರ್.ಶಂಕರ್ ಹಾಗೂ ಎನ್.ನಾಗೇಶ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಉಪಸ್ಥಿತರಿದ್ದರು. pic.twitter.com/M5e2I8uyE9
— CM of Karnataka (@CMofKarnataka) June 14, 2019
ಮುಳುಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎಚ್. ನಾಗೇಶ್ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರೆ, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಆರ್. ಶಂಕರ್ ಎರಡನೇ ಬಾರಿಗೆ ಸಚಿವರಾಗಿದ್ದಾರೆ.
ಆರ್. ಶಂಕರ್ ಅವರಿಗೆ ಕಾಂಗ್ರೆಸ್ ಕೋಟಾದಿಂದ, ಎಚ್. ನಾಗೇಶ್ ಅವರಿಗೆ ಜೆಡಿಎಸ್ ಕೋಟಾದಿಂದ ಮಂತ್ರಿ ಪದವಿ ನೀಡಲಾಗಿದೆ.