ರಾಯಚೂರು : ರಾಷ್ಟದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಹಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ 3ನೇ ದಿನವಾದ ಇಂದು ರಾಹುಲ್ ರಾಯಚೂರಿನಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಚೀನಾದಲ್ಲಿ ಭಾರತಕ್ಕಿಂದ ಹೆಚ್ಚು ಜನಸಂಖ್ಯೆಯಿದ್ದರೂ, ಉದ್ಯೋಗ ಸೃಷ್ಟಿಯಲ್ಲಿ ಚೀನಾ ಮುಂದಿದೆ. ಆದರೆ ಕೇಂದ್ರದ ಎನ್‌ಡಿಎ ಸರ್ಕಾರ ಯುವಜನತೆಯನ್ನು ಕಡೆಗಣಿಸಿದ್ದು, ಉದ್ಯೋಗಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರನ್ನು ರಕ್ಷಣೆ ಮಾಡುವ ಯೋಜನೆ ತೆಗೆದುಹಾಕಿ, ರೈತರ ಮೇಲೆ ಅತಿಕ್ರಮಣ ಮಾಡುವ ನೀತಿ ಅನುಸರಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ರಾಯಚೂರಿನ ಯರಮರಸ್ ನಿಂದ ಜನಾಶಿರ್ವಾದ ಯಾತ್ರೆ ವಿಶೇಷ ಬಸ್ ನಲ್ಲಿ ರೋಡ್ ಶೋಒ ಆರಂಭಿಸಿದ ರಾಹುಲ್, ಗಂಜ್ ವೃತ್ತದಲ್ಲಿರುವ ದರ್ಗಾಗೆ ಭೇಟಿ ನೀಡಿ, ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ರಾಹುಲ್ ಅಭಿಮಾನಿಗಳು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲಿಸ್ ಬಂದೋಬಸ್ತ್ ಕೂಡ ಮಾಡಲಾಗಿದೆ.