ಬಂಡಾಯ ಶಮನಕ್ಕೆ ಸಿಎಂ ಕುಮಾರಸ್ವಾಮಿ ಸಹಾಯ ಕೋರಿದ ರಾಹುಲ್; ಕಾಂಗ್ರೆಸ್ ನಾಯಕರಿಗೆ ಮುಖಭಂಗ!

ಬಂಡಾಯ ಶಮನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಹಾಯ ಕೋರಿದ್ದಾರೆ.

Last Updated : Jun 11, 2018, 12:25 PM IST
ಬಂಡಾಯ ಶಮನಕ್ಕೆ ಸಿಎಂ ಕುಮಾರಸ್ವಾಮಿ ಸಹಾಯ ಕೋರಿದ ರಾಹುಲ್; ಕಾಂಗ್ರೆಸ್ ನಾಯಕರಿಗೆ   ಮುಖಭಂಗ! title=

ಬೆಂಗಳೂರು : ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಹಾಯ ಕೋರಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. 

ಅಧಿಕಾರದ ಆಸೆ ಇದ್ದವರಲ್ಲಿ ಅಸಮಾಧಾನ ಸಹಜ: ಸಿದ್ದರಾಮಯ್ಯ

ಮೂರು ದಿನಗಳ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಬಂಡಾಯ ಶಮನಕ್ಕೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುವಂತೆ ರಾಹುಲ್ ಗಾಂಧಿ ಅವರೇ ಸಲಹೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಸರ್ಕಾರ ಸುಗಮವಾಗಿ ಸಾಗುವುದು ಮುಖ್ಯ ಉದ್ದೇಶ. ನಿಮ್ಮೊಂದಿಗೆ ನಾವಿದ್ದೇವೆ. ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುವುದನ್ನು ಬಿಟ್ಟು, ಅಸಮಾಧಾನ ಮಾಡಿಕೊಂಡು ಕೂರುವುದು ಸರಿಯಲ್ಲ, ಮೈತ್ರಿ ಸರ್ಕಾರದಲ್ಲಿ ಎಲ್ಲರಿಗೂ ಮಂತ್ರಿ ಸ್ಥಾನ ಸಿಗಬೇಕು ಎಂದರೆ ಸಾಧ್ಯವಿಲ್ಲ. ಹಾಗಾಗಿ ಇಬ್ಬರೂ ಒಗ್ಗಟ್ಟಾಗಿ ಬಂಡಾಯ ಶಮನಕ್ಕೆ ಪ್ರಯತ್ನಿಸಿ, ಸುಗಮ ಆಡಳಿತ ನಡೆಸೋಣ ಎಂದಿದ್ದಾರೆ ಎನ್ನಲಾಗಿದೆ. 

'ಎರಡು ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯವಿಲ್ಲ' ಎಂ ಬಿ ಪಾಟೀಲ್ ಗೆ ರಾಹುಲ್ ಗಾಂಧಿ ಖಡಕ್ ಸೂಚನೆ

ಆದರೆ, ರಾಹುಲ್ ಗಾಂಧಿ ಅವರು ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಮಾತನಾಡಿರುವ ವಿಷಯ ತಿಳಿದು ಕಾಂಗ್ರೆಸ್ ನಾಯಕರಿಗೆ ದೊಡ್ಡ ಆಘಾತವನ್ನುಂಟುಮಾಡಿದೆ. ರಾಜ್ಯದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಿದ್ದರೂ ಜೆಡಿಎಸ್ ಸಹಾಯ ಕೋರಿದ ರಾಹುಲ್ ಗಾಂಧಿ ನಡೆ ಬಗ್ಗೆ, ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಜೆಡಿಎಸ್'ಗೆ ಕಾಂಗ್ರೆಸ್ ಅಡವಿಟ್ಟಂತೆ ಆಗಿದೆ. ಇದಕ್ಕೆ ಬದಲಾಗಿ ವಿರೋಧ ಪಕ್ಷದಲ್ಲಿಯೇ ಕುಳಿತುಕೊಳ್ಳಬಹುದಿತ್ತು ಎನ್ನುತ್ತಾ ಪಕ್ಷದ ಪರಿಸ್ಥಿತಿ ಕಂಡು ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಆಪತ್ಬಾಂಧವ ಎಂದೇ ಹೆಸರಾಗಿರುವ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಬಂಡಾಯ ಶಮನ ಮಾಡುವ ಸಾಮರ್ಥ್ಯವಿದ್ದರೂ ಅವರೇ ಸ್ವತಃ ಅಸಮಾಧಾನಗೊಂಡಿರುವುದರಿಂದ ಅವರೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬ ಮಾತೂ ಕೇಳಿಬರುತ್ತಿದೆ.

ಸಚಿವ ಸ್ಥಾನ ಬೇಡ, ಕೊಟ್ರೆ ಡಿಸಿಎಂ ಸ್ಥಾನ ಕೊಡಿ: ಎಂ.ಬಿ.ಪಾಟೀಲ್

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ರಾಜ್ಯದ ರಾಜಕೀಯದಲ್ಲಿ ತಲ್ಲಣ ಉಂಟುಮಾಡಿದ್ದ ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ.ಪಾಟೀಲ್ ತಮಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದರು. ಅಲ್ಲದೆ, ತಮ್ಮ ಬೆಂಬಲಕ್ಕೆ 20 ಮಂದಿ ಶಾಸಕರಿದ್ದು, ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಪಾಟೀಲ್ ಎಚ್ಚರಿಕೆ ನೀಡಿದ್ದರು. ಇದನ್ನು ಗಂಭಿರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮ್ಯಾಂಡ್ ಎಂ.ಬಿ.ಪಾಟೀಲ್ ಜೊತೆ ಮಾತುಕತೆ ನಡೆಸಿ, ಉಪಮುಖ್ಯಮಂತ್ರಿ ಸ್ಥಾನ ಸಾಧ್ಯವಿಲ್ಲ; ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇದೀಗ ಪಕ್ಷದಲ್ಲಿನ ಬಂಡಾಯ ಮತ್ತಷ್ಟು ಹೆಚ್ಚಾಗಿದ್ದು, ಇದರ ಶಮನಕ್ಕೆ ರಾಹುಲ್ ಗಾಂಧಿ ಕುಮಾರಸ್ವಾಮಿ ಮೊರೆ ಹೋಗಿದ್ದಾರೆ ಎನ್ನಲಾಗಿದ್ದು, ಇದು ಕಾಂಗ್ರೆಸ್ ನಾಯಕರಿಗೆ ತೀವ್ರ ಮುಖಭಂಗವುಂಟುಮಾಡಿದೆ.

Trending News