ದೇಶವಿರೋಧಿಗಳ ಜತೆ ಕೈ ಜೋಡಿಸುವುದೇ ರಾಹುಲ್ ಗಾಂಧಿ ನಡೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

  ಭಾರತದ ವಿರೋಧಿಗಳ ಜತೆ ಕೈ ಜೋಡಿಸುವುದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

Written by - Manjunath N | Last Updated : Sep 13, 2024, 03:50 PM IST
  • ಇಲ್ಲಿ ಪ್ರಧಾನಿ ಮೋದಿ ಅವರು ಸಿಜೆ ಮನೆಗೆ ಹೋಗಿದ್ದಕ್ಕಲ್ಲ ವಿರೋಧ
  • ಗಣಪತಿ ಪೂಜೆ ಮಾಡಿದ್ದಕ್ಕೆ ಅವರ ವಿರೋಧ
  • ಹೀಗೆ ಯಾವತ್ತೂ ಹಿಂದೂ ವಿರೋಧಿಯಾಗೆ ವರ್ತಿಸುತ್ತಿದ್ದಾರೆ ಕಾಂಗ್ರೆಸ್ ನಾಯಕರು ಎಂದು ಪ್ರಲ್ಹಾದ ಜೋಶಿ ಕಿಡಿ ಕಾರಿದರು
ದೇಶವಿರೋಧಿಗಳ ಜತೆ ಕೈ ಜೋಡಿಸುವುದೇ ರಾಹುಲ್ ಗಾಂಧಿ ನಡೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ title=

ಹುಬ್ಬಳ್ಳಿ:  ಭಾರತದ ವಿರೋಧಿಗಳ ಜತೆ ಕೈ ಜೋಡಿಸುವುದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಅವಹೇಳನ ಮಾಡುವುದು  ದೇಶದ್ರೋಹದ ಕೆಲಸ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೇಶದ್ರೋಹಿಗಳ ಜತೆ, ಭಾರತದ ವಿರೋಧಿಗಳ ಜತೆ ರಾಹುಲ್ ಗಾಂಧಿ ದೇಶದ ವಿರುದ್ಧವಾಗಿ, ಪ್ರಜಾಪ್ರಭುತ್ವವನ್ನು ವಿರೋಧಿಸುವ ರೀತಿ ಮಾತನಾಡುತ್ತಾರೆ ಎಂದು ಹರಿ ಹಾಯ್ದರು. 

ವಿದೇಶದಲ್ಲಿ ನಿಂತು ಭಾರತದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎನ್ನುವ ರಾಹುಲ್ ಗಾಂಧಿ, ತುರ್ತು ಪರಿಸ್ಥಿತಿ ಹೇರಿದವರು ಯಾರು? ಎಂಬುದನ್ನು ಅರಿತುಕೊಂಡು ಮಾತನಾಡಲಿ ಎಂದು ಜೋಶಿ ತಿರುಗೇಟು ನೀಡಿದರು.

ಕಾಂಗ್ರೆಸ್ ನಲ್ಲಿ ಖರ್ಗೆ ಪ್ರಧಾನಿ ಅಭ್ಯರ್ಥಿ ಎನ್ನಲಿ ನೋಡೋಣ: ಪ್ರಜಾಪ್ರಭುತ್ವ, ಸಮಾನತೆ ಎಂದು ಭಾಷಣ ಬಿಗಿಯುವ ರಾಹುಲ್ ಗಾಂಧಿ ಕಾಂಗ್ರೆಸ್ನಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಲಿ ನೋಡೋಣ ಎಂದು ಜೋಶಿ ಸವಾಲು ಹಾಕಿದರು.

ಇದನ್ನೂ ಓದಿ- ಮುಡಾ ಹಗರಣದಂತೆ ಬಿಡಿಎ ಹಗರಣ ಕೂಡ ನಿಮ್ಮ ಕೊರಳಿಗೆ ಸುತ್ತಿಕೊಳ್ಳಲಿದೆ: ಸಿಎಂ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಅನುಕೂಲ ಸಿಂಧು ವಾದ: ಇನ್ನು, ಚುನಾವಣಾ ಆಯೋಗದ ಬಗ್ಗೆ ಆರೋಪ ಮಾಡುತ್ತಾರೆ.ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶಗಳಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷಗಳು ಗೆದ್ದಿಲ್ಲವೇ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ನವರಿಗೆ ಪ್ರಜಾಪ್ರಭುತ್ವ, ಚುನಾವಣಾ ಆಯೋಗ, ನ್ಯಾಯಾಂಗ ಹೀಗೆ ಸಾಂವಿಧಾನಿಕವಾಗಿ ಇರುವ ಯಾವುದರ ಮೇಲೂ ನಂಬಿಕೆಯೇ ಇಲ್ಲ. ಅನುಕೂಲ ಸಿಂಧುಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗಣಪತಿ ಪೂಜೆ ಮಾಡಿದ್ದಕ್ಕೆ ವಿರೋಧ: ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ. ಹಾಗಾಗಿ ಪ್ರಧಾನಿ ಮೋದಿ ಸಿಜೆ ಅವರ ಮನೆಯಲ್ಲಿ ಗಣಪತಿ ಪೂಜೆ ಮಾಡಿದ್ದಕ್ಕೆ ವಿರೋಧ ಮಾಡುತ್ತಿದೆ ಎಂದು ಜೋಶಿ ಟೀಕಿಸಿದರು.

ಹಿಂದೆ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ಅವರು ಸಿಜೆಯವರ ಇಫ್ತೀಯಾರ್ ಕೂಟದಲ್ಲಿ  ಭಾಗವಹಿಸಿದ್ದರಲ್ಲ.  ಆಗೇಕೆ ಆಕ್ಷೇಪಿಸಲಿಲ್ಲ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ- ಸರ್ಕಾರಿ ಶಾಲೆಗಳಿಗೆ ದೇಣಿಗೆ ನೀಡಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ-ಸಚಿವ ಮಧು ಬಂಗಾರಪ್ಪ 

ಇಲ್ಲಿ ಪ್ರಧಾನಿ ಮೋದಿ ಅವರು ಸಿಜೆ ಮನೆಗೆ ಹೋಗಿದ್ದಕ್ಕಲ್ಲ ವಿರೋಧ. ಗಣಪತಿ ಪೂಜೆ ಮಾಡಿದ್ದಕ್ಕೆ ಅವರ ವಿರೋಧ. ಹೀಗೆ ಯಾವತ್ತೂ ಹಿಂದೂ ವಿರೋಧಿಯಾಗೆ ವರ್ತಿಸುತ್ತಿದ್ದಾರೆ ಕಾಂಗ್ರೆಸ್ ನಾಯಕರು ಎಂದು ಪ್ರಲ್ಹಾದ ಜೋಶಿ ಕಿಡಿ ಕಾರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News