Rain alert Karnataka: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜಧಾನಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್ 17ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: "ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ"
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆಯಿಂದ ಮುಂದಿನ 3 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯದಲ್ಲಿ ಹಾಗೂ ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಎರಡು ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶಗಳಲ್ಲಿಯೂ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: cm ಸಿದ್ದರಾಮಯ್ಯನವರ ವಿರುದ್ಧ ಮತ್ತೊಂದು ದೂರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.