ಚುಮು ಚುಮು ಚಳಿ ನಡುವೆ ರಾಜ್ಯದ ಜನತೆಗೆ ಮತ್ತೆ ವರುಣನ ಕಾಟ- ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Rain alert in Karnataka: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ವರುಣ ಮತ್ತೆ ಅಬ್ಬರಿಸಲಿದ್ದಾನೆ. ಇಂದಿನಿಂದ (ನವೆಂಬರ್ 22)   ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

Written by - Yashaswini V | Last Updated : Nov 21, 2022, 01:07 PM IST
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ
  • 22ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
  • ಇಂದಿನಿಂದ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ತಿಳಿಯಿರಿ
ಚುಮು ಚುಮು ಚಳಿ ನಡುವೆ ರಾಜ್ಯದ ಜನತೆಗೆ ಮತ್ತೆ ವರುಣನ ಕಾಟ- ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ  title=
Karnataka rain alert

ಬೆಂಗಳೂರು: ಚುಮು ಚುಮು ಚಳಿ ನಡುವೆ ರಾಜ್ಯದ ಜನತೆಗೆ ಮತ್ತೆ ಮಳೆ ಕಾಟ ಆರಂಭವಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ (ನವೆಂಬರ್ 22)   ರಾಜ್ಯದ ಹಲವೆಡೆ ವರುಣ ಮತ್ತೆ ಅಬ್ಬರಿಸಲಿದ್ದು ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಪ್ರದೇಶಗಳಲ್ಲಿ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಇದನ್ನೂ ಓದಿ- ಶಾಸಕ ಎಂ.ಪಿ ಕುಮಾರಸ್ವಾಮಿ ಮೇಲೆ ಗ್ರಾಮಸ್ಥರಿಂದ ಹಲ್ಲೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ- ಟ್ಯಾಂಕ್ ಸ್ವಚ್ಛ ಪ್ರಕರಣ: ಗ್ರಾಮದ ಎಲ್ಲಾ‌ ತೊಂಬೆಗಳಲ್ಲಿ ನೀರು‌ ಕುಡಿದ ದಲಿತ ಯುವಕರು

ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News