ರಾಜ್ಯದಲ್ಲಿ ಮುಂದಿನ ವಾರವೂ ಮಳೆ ಆರ್ಭಟ : ಹವಾಮಾನ ಇಲಾಖೆ ಮಾಹಿತಿ

ರಾಜ್ಯದಲ್ಲಿ ಮುಂದಿನ ವಾರವೂ ಸಹ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Written by - Krishna N K | Last Updated : Sep 3, 2022, 04:05 PM IST
  • ರಾಜ್ಯದಲ್ಲಿ ಮುಂದಿನ ವಾರವೂ ಸಹ ಮಳೆ
  • ಹವಾಮಾನ ಇಲಾಖೆ ಮಾಹಿತಿ
  • 6 ಹಾಗೂ 7 ನೇ ತಾರೀಕಿನಂದು ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂದಿನ ವಾರವೂ ಮಳೆ ಆರ್ಭಟ : ಹವಾಮಾನ ಇಲಾಖೆ ಮಾಹಿತಿ title=

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರವೂ ಸಹ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ವಾರ 6 ಹಾಗೂ 7 ನೇ ತಾರೀಕಿನಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಮುರುಘಾ ಶ್ರೀ ಲೈಂಗಿಕ ಕಿರುಕುಳ ಪ್ರಕರಣ: ಮಕ್ಕಳು ಮಾನಸಿಕವಾಗಿ ಕುಗ್ಗಿಲ್ಲ..!

ಅಲ್ಲದೆ, ಮುಂದಿನ ಐದೂ ದಿನವೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್, ಸೋಮವಾರದಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News