ಬೆಂಗಳೂರು: ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಯಲಹಂಕ ಏರ್ಪೊಸ್ ಗೆ ಹೊಂದಿಕೊಂಡ ಹುಣಸಮಾರನಹಳ್ಳಿ ಕೆರೆ ಭರ್ತಿ ಆಗಿದೆ. ಜೊತೆಗೆ ಪ್ರಭಾವಿ ವ್ಯಕ್ತಿಗಳು ರಾಜಕಾಲುವೆ ಒತ್ತುವರಿ ಮಾಡಿದ್ದರ ಪರಿಣಾಮ ನೀರು ಕೆರೆಗೆ ಹರಿಯದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಪರಿಣಾಮ ಈ ಸಮಸ್ಯೆ ಎದುರಾಗಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿ ಏರ್ಪೋರ್ಟ್ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಕೆರೆ ನೀರು ಮತ್ತು ಮಳೆ ನೀರು ರಸ್ತೆಗೆ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಅಡಿ ನೀರು ನಿಂತಿದೆ. ರಾಜಕಾಲುವೆ ಮುಚ್ವಿರುವುದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ. ಆದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ಇದನ್ನೂ ಓದಿ- BREAKING NEWS: ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ
ಏರ್ಪೊಟ್ ಕಡೆಯಿಂದ ಬೆಂಗಳೂರು ನಗರಕ್ಕೆ ತೆರಳುವ ಹುಣಸಮಾರನಹಳ್ಳಿ ಬಳಿ ಕಿ.ಮೀ ಗಟ್ಟಲೇ ಟ್ರಾಪಿಕ್ ಜಾಮ್ ಉಂಟಾಗಿದೆ. ರಾಜಕಾಲುವೆ ಒತ್ತುವರಿದಾರರು ಅಕ್ರಮ ಲೇಔಟ್ ಗಳನ್ನು ನಿರ್ಮಿಸಿರುವುದೇ ಸಮಸ್ಯೆಗೆ ಕಾರಣ ಎಂದು ಸಾರ್ವಜನಿಕರು ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆರೆ ಭರ್ತಿಯಿಂದಾಗಿ ಯಲಹಂಕ ಬಳಿಯ ಹುಣಸಮಾರನಹಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿ ಏರ್ಪೋರ್ಟ್ ಗೆ ಹೋಗುವ ಹಾಗೂ ಬರುವ ಪ್ರಯಾಣಿಕರು ರಸ್ತೆಲಿ ನಿಂತು ಹೈರಾಣಾಗಿದ್ದಾರೆ.
ಇದನ್ನೂ ಓದಿ- ಮಾಜಿ ಪ್ರಧಾನಿ H.D Devegowdaರಿಗೆ ಹುಟ್ಟುಹಬ್ಬದ ಸಂಭ್ರಮ: ʼಮಣ್ಣಿನ ಮಗʼನಿಗೆ 90ರ ಹರೆಯ...!
ಹುಣಸಮಾರನಹಳ್ಳಿ ಕೆರೆಗೆ ರಾಜಕಾಲುವೆ ಸಂಪರ್ಕ ಬಂದ್ ಮಾಡಿರುವ ಪರಿಣಾಮ ರಾಜಕಾಲುವೆ ನೀರು ರಾಷ್ಟ್ರೀಯ ಹೆದ್ದಾರಿಗೆ ಹರಿದಿದೆ. ಇದರ ಪರಿಣಾಮವಾಗಿ ಬೆಳಗ್ಗೆ 6 ಗಂಟೆಯಿಂದ ಸುಮಾರು 10-30ರ ವರೆಗೂ ರೋಡ್ ಕ್ಲಿಯರೆನ್ಸ್ ಇಲ್ಲದೆ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. 22 ಕ್ಕು ಹೆಚ್ಚು ಬಿಎಂಡಬ್ಲ್ಯೂ, ಹತ್ತಕ್ಕು ಹೆಚ್ಚು ಔದಿ ಐಷಾರಾಮಿ ಕಾರುಗಳು ಸೇರಿದಂತೆ ನೂರಾರು ವಾಹನಗಳು ಕೆಟ್ಟು ರಸ್ತೆಯಲ್ಲೆ ನಿಂತಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.