ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ:ಈ ಜಿಲ್ಲೆಗಳಲ್ಲಿಯೂ ಅಬ್ಬರಿಸಲಿದ್ದಾನೆ ವರುಣ

Karnataka Rain Update :ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  

Written by - Ranjitha R K | Last Updated : May 14, 2024, 01:36 PM IST
  • ರಾಜ್ಯ ರಾಜಧಾನಿಗೆ ಮಳೆ ಕಾಲಿಟ್ಟಾಗಿದೆ.
  • ಕಳೆದ ಒಂದು ವಾರದಿಂದ ಬೆಂಗಳೂರಿನ ಹಲವೆಡೆ ಮಳೆಯಾಗುತ್ತಿದೆ.
  • ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆ:ಈ ಜಿಲ್ಲೆಗಳಲ್ಲಿಯೂ ಅಬ್ಬರಿಸಲಿದ್ದಾನೆ ವರುಣ  title=

Karnataka Rain Update : ಬಿಸಿಲಿನಿಂದ ಬೇಸತ್ತಿರುವ ರಾಜ್ಯ ರಾಜಧಾನಿಗೆ ಮಳೆ ಕಾಲಿಟ್ಟಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಹಲವೆಡೆ ಮಳೆಯಾಗುತ್ತಿದೆ. ಈ ನಡುವೆ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಕೂಡಾ ಮಳೆಯಾಗಲಿದೆ ಎಂದು ಹೇಳಿದೆ. ಕರ್ನಾಟಕದ ಒಳನಾಡಿನಲ್ಲಿ 1.5 ಕಿಮೀ ಎತ್ತರದಲ್ಲಿ ಸುಳಿಗಾಳಿ ಬೀಸುವ ಹಿನ್ನೆಲೆಯಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚಿನ ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಇದಿನಿಂದ 18 ರವರೆಗೆ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ :  ಲೋಕಸಭೆ ಫಲಿತಾಂಶ ಬಂದ ನಂತರ ಶಿಂದೆಯೇ ಮಾಜಿ ಆಗುತ್ತಾರೆ - ಎಂ ಬಿ ಪಾಟೀಲ್

ಇನ್ನು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಇನ್ನು ಮಂಡ್ಯದಲ್ಲಿ 9 ಸೆ.ಮೀ ಮಳೆ, ನಿಪ್ಪಾಣಿ, ಬೆಳಗಾವಿಯಲ್ಲಿ 6 ಸೆ.‌ಮೀ, ಮೈಸೂರಿನಲ್ಲಿ 5 ಸೆ.ಮೀ ಮಳೆ ಆಗಿದೆ. 

ಈ ಮಧ್ಯೆ, ಬೆಂಗಳೂರಿನಲ್ಲಿ ಕಳೆದ ರಾತ್ರಿ ಮಳೆರಾಯನ ಅಬ್ಬರ ಜೋರಾಗಿದ್ದು, ಅನೇಕ ಕಡೆಗಳಲ್ಲಿ ನೀರು ನುಗ್ಗಿದೆ. ಮಳೆಯ ತೀವ್ರತೆಗೆ ಬೆಳ್ಳಂದೂರು ಮುಖ್ಯರಸ್ತೆ  ಜಲಾಶಯದಂತಾಗಿತ್ತು. ರಸ್ತೆಗಳ ಮುಳುಗಡೆಯಿಂದ ವಾಹನ ಸವಾರರು  ಪರದಾಡುವಂತಾಗಿತ್ತು. ಒಂದೆಡೆ ಹಳ್ಳಕೊಳ್ಳ ಮತ್ತೊಂದೆಡೆ ಜಲಾವೃತವಾದ ರಸ್ತೆಗೆ ಸವಾರರು ಹೈರಾಣಾಗುವಂತೆ ಮಾಡಿತ್ತು. 

ಇದನ್ನೂ ಓದಿ :  ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News