Mallikarjun Kharge : 'ಚುನಾವಣೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎನ್ನುವುದು ಸರಿಯಲ್ಲಾ'

ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎಂದು ಹೇಳುವುದು ಸರಿಯಲ್ಲಾ, ಸಿಎಂ ಯಾರಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲಾ. ಪಕ್ಷದ ಹೈ ಕಮಾಂಡ್ ಅದನ್ನ ತೀರ್ಮಾನ ಮಾಡುತ್ತದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

Written by - Channabasava A Kashinakunti | Last Updated : Jul 23, 2022, 02:31 PM IST
  • ಪಕ್ಷದ ಹೈ ಕಮಾಂಡ್ ಅದನ್ನ ತೀರ್ಮಾನ ಮಾಡುತ್ತದೆ
  • ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ
  • ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿಚಾರ
Mallikarjun Kharge : 'ಚುನಾವಣೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎನ್ನುವುದು ಸರಿಯಲ್ಲಾ' title=

ಮೈಸೂರು : ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎಂದು ಹೇಳುವುದು ಸರಿಯಲ್ಲಾ, ಸಿಎಂ ಯಾರಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲಾ. ಪಕ್ಷದ ಹೈ ಕಮಾಂಡ್ ಅದನ್ನ ತೀರ್ಮಾನ ಮಾಡುತ್ತದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈ ಕಮಾಂಡ್ ಯಾರಿಗೆ ನಾಯಕತ್ವಕ್ಕೆ ಕೊಡಬೇಕು ಎಂಬುದನ್ನ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ಯಾವಾಗಲೂ ಸಮೂಹಿಕ ನಾಯಕತ್ವದಲ್ಲೇ ಹೋಗುವುದು. ಈ ಭಾರಿ ಆ ಭಾರಿ ಅಂತಲ್ಲಾ. ನಮ್ಮದು ಯಾವಗಲೂ ಸಾಮೂಹಿಕ‌ ನಾಯಕತ್ವ. ಮೊದಲು ಪಕ್ಷವನ್ನ ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಮೂಲ ಕಾಂಗ್ರೆಸಿಗರ ಸರ್ವನಾಶವೇ ‘ಸಿದ್ದರಾಮೋತ್ಸವ’ದ ಉದ್ದೇಶ: ಬಿಜೆಪಿ ಆರೋಪ

ರಾಜ್ಯ ರಾಜಕಾರಣಕ್ಕೆ ಖರ್ಗೆ ಮರಳುವ ವಿಚಾರವಾಗಿ ಮಾತನಾಡಿದ ಅವರು, ನೀವು ಅವಕಾಶ ಕೊಟ್ಟರೆ(ಮಾಧ್ಯಮದವರು) ಬರುತ್ತೇನೆ. ಎಲ್ಲಾ ಸೇರಿ ಚಾನ್ಸ್ ಕೊಟ್ಟರೆ ನೋಡಣಾ ಎಂದು ಹೇಳಿದ್ದಾರೆ. 

ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿಚಾರವಾಗಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈ ದೇಶಕ್ಕಾಗಿ ಮನೆಯರನ್ನೇ ಕಳೆದುಕೊಂಡವರು ಒಂದು ಕೋಟಿ ರೂಪಾಯಿ ಅವ್ಯವಹಾರ ಮಾಡುತ್ತಾರೇನ್ರಿ.ಗಾಂಧಿ ಕುಟುಂಬವನ್ನ ವಿಚಾರಣೆಗೆ ಕರೆದ ಕೂಡಲೇ ನಾವು ಮಾನಸಿಕವಾಗಿ ಕುಗ್ಗುವುದಿಲ್ಲಾ.ಸ್ವತಂತ್ರ ಹೋರಾಟ ಮಾಡಿ, ಚಳುವಳಿಗಳನ್ನ ತ್ಯಾಗ ಬಲಿದಾನ ಮಾಡಿರುವ ಪಕ್ಷ ಕಾಂಗ್ರೆಸ್, ನಮ್ಮನ್ನ ಬಿಜೆಪಿಯವರುಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ‌. ಸತ್ಯಗ್ರಾಹವೇ ಮಾಡದವರು, ತ್ಯಾಗ ಬಲಿದಾನ ಗೊತ್ತಿಲ್ಲದ ಬಿಜೆಪಿಯವರಿಂದ ನಮ್ಮನ್ನ ಹೆದರಿಸಲು ಸಾಧ್ಯವಿಲ್ಲಾ. ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಗಿಮಿಕ್ ಗಳನ್ನ ಬಿಜೆಪಿ ಮಾಡುತ್ತಿದೆ ಎಂದು ಹೇಳಿದ್ದಾರೆ. 

ರಾಜಕಾರಣದಿಂದ ಯಡಿಯೂರಪ್ಪ ನಿವೃತ್ತಿ ವಿಚಾರ‌ವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವಯಕ್ತಿಕ ನಿರ್ಧಾರ.ಅದರ ಬಗ್ಗೆ ನಾನೇನು ಮಾತನಾಡಲ್ಲಾ. ಎಲ್ಲರಿಗೂ ಅವರ ಅವರದ್ದೆ ತೀರ್ಮಾನಗಳನ್ನ ತೆಗೆದುಕೊಳ್ಳುವ ಸ್ವತಂತ್ರ ಇರುತ್ತದೆ. ನಾವು ಯಾರೇ ಇರಲಿ ಬಿಡಲಿ ದೇಶ ಅಂತೂ ಇರುತ್ತದೆ. ನಾನಿಲ್ಲಾ ಇಲ್ಲಾ ಇನ್ನೊಬ್ರು ಬರುತ್ತಾರೆ. ಹಾಗೇ ಯಡಿಯೂರಪ್ಪ ಯೋಚನೆ ಮಾಡರಿಬಹುದು ಎಂದು ಹೇಳಿದ್ದಾರೆ. 

ಇದನ್ನೂ ಓದಿ : ರಾಜ್ಯದ ಸಚಿವ ಸಂಪುಟ ನಿರ್ಣಯಗಳ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಟೀಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News