ಬೆಂಗಳೂರಲ್ಲೂ ರಾಮಮಂದಿರ ನಿರ್ಮಾಣ?

ರಾಮಮಂದಿರ ಕಟ್ಟಲು ಭಾರತೀಯರೆಲ್ಲರೂ ಸಹಕಾರ ನೀಡುತ್ತಾರೆ ಎಂಬ ಭರವಸೆಯಿದೆ. ಹೀಗಾಗಿ ಬೆಂಗಳೂರಿನಲ್ಲಿಯೂ ರಾಮಮಂದಿರ ಕಟ್ಟುವ ಬಗ್ಗೆ ಚರ್ಚೆ ನಡೆದಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ.

Last Updated : Nov 5, 2018, 05:28 PM IST
ಬೆಂಗಳೂರಲ್ಲೂ ರಾಮಮಂದಿರ ನಿರ್ಮಾಣ? title=

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಬಿಸಿ ಚರ್ಚೆ ನಡೆಯುತ್ತಿದೆ. ರಾಮ ಆದರ್ಶ ಪುರುಷ, ಆತನಿಗೆ ಇಡೀ ಭಾರತವೇ ಗೌರವ ನೀಡುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿಯೂ ರಾಮಮಂದಿರ ಮಾಡುವ ಬಗ್ಗೆ ನಮ್ಮದೊಂದು ತಂಡ ಚರ್ಚೆ ನಡೆಸುತ್ತಿದೆ. ಬೆಂಗಳೂರಿನ ಹನುಮಗಿರಿ ತಪ್ಪಲಿನಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ನುಡಿದರು. 

ಮುಂದುವರೆದು ಮಾತನಾಡಿದ ಅವರು, ರಾಮಮಂದಿರ ಕಟ್ಟಲು ಭಾರತೀಯರೆಲ್ಲರೂ ಸಹಕಾರ ನೀಡುತ್ತಾರೆ ಎಂಬ ಭರವಸೆಯಿದೆ. ಹೀಗಾಗಿ ಬೆಂಗಳೂರಿನಲ್ಲಿಯೂ ರಾಮಮಂದಿರ ಕಟ್ಟುವ ಬಗ್ಗೆ ಚರ್ಚೆ ನಡೆದಿದೆ ಎಂದರು.

Trending News