ಮತದಾರರ ಮಾಹಿತಿ ಕಳ್ಳತನ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ! ಎಂದು ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Nov 17, 2022, 05:08 PM IST
  • ಪರಿಷ್ಕರಣೆ ನೆಪದಲ್ಲಿ ಚಿಲುಮೆ ಎಜುಕೇಶನ್ ಇನ್ಸ್‌ಟಿಟ್ಯೂಟ್ ಮೂಲಕ ಮತದಾರರ ಮಾಹಿತಿ ಕಳ್ಳತನ
  • ಇದು ಅಕ್ರಮದ ಮೂಲಕ ಮತದಾರರ ಸಂವಿಧಾನ ದತ್ತ ಮತದಾನದ ಹಕ್ಕು ಕಸಿಯುವ ಪ್ರಯತ್ನ
  • ಈ ಅಕ್ರಮದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ರಣದೀಪ್ ಸಿಂಗ್ ಸುರ್ಜೇವಾಲಾ
ಮತದಾರರ ಮಾಹಿತಿ ಕಳ್ಳತನ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ title=
ಸಿಎಂ ಬೊಮ್ಮಾಯಿ ವಿರುದ್ಧ ಸುರ್ಜೇವಾಲಾ ಆಕ್ರೋಶ

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಅಕ್ರಮದ ಹೊಣೆಹೊತ್ತು ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡಲೇ ರಾಜೀನಾಮೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಚಿಲುಮೆ ಎಜುಕೇಶನ್ ಇನ್ಸ್‌ಟಿಟ್ಯೂಟ್ ಎಂಬ ಸಂಸ್ಥೆಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ. ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ!’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ

‘ಇದು ಅಕ್ರಮದ ಮೂಲಕ ಮತದಾರರ ಸಂವಿಧಾನ ದತ್ತ ಮತದಾನದ ಹಕ್ಕು ಕಸಿಯುವ ಪ್ರಯತ್ನ. ಇದರ ಜವಾಬ್ದಾರಿ ಸಿಎಂ ಬೊಮ್ಮಾಯಿಯವರ ಮೇಲಿದ್ದು, ಅವರು ಈ ಅಕ್ರಮದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಕೂಡಲೇ ಸಿಎಂ ಬೊಮ್ಮಾಯಿಯವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಬೇಕು’ ಎಂದು ಸುರ್ಜೇವಾಲಾ ಒತ್ತಾಯಿಸಿದ್ದಾರೆ.

‘ಚಿಲುಮೆ ಎಂಬ ಖಾಸಗಿ ಸಂಸ್ಥೆಗೆ ಸರ್ಕಾರ ಹಾಗೂ ಬಿಬಿಎಂಪಿ ಬದಲಿಗೆ ಕೆಲಸ ಮಾಡಲು ಅನುಮತಿ ನೀಡಿದ್ದು ಯಾರು? ಯಾವ ಆಧಾರದ ಮೇಲೆ ಈ ಖಾಸಗಿ ಸಂಸ್ಥೆಗಳಿಗೆ ಒಂದೇ ದಿನದಲ್ಲಿ ಅನುಮತಿ ನೀಡಲಾಯಿತು? ಚುನಾವಣಾ ಕೆಲಸವನ್ನು ಖಾಸಗಿ ಸಂಸ್ಥೆಗೆ ನೀಡುವ ಮುನ್ನ ಯಾಕೆ ಜಾಹೀರಾತು ಪ್ರಕಟಿಸಲಿಲ್ಲ?’ವೆಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದಾರೆ : ಸಿಎಂ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News