ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ(Rape Case) ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಲಾಗಿದೆ. ಕೊಪ್ಪಳ(Koppal)ದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ.ಜಾಲವಾದಿ ಅವರು ಈ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ: ಅಸಮರ್ಥ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆಶಿ ಹತಾಶೆಗೆ ಬಿದ್ದಿದ್ದಾರೆ: ಬಿಜೆಪಿ ಟೀಕೆ
ಕೊಪ್ಪಳದ ಮಂಜುನಾಥ ಬಾವಿಮನಿ ಎಂಬ ವ್ಯಕ್ತಿಯು 2020ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ವಿವಿಧ ಆಮೀಷಗಳನ್ನು ತೋರಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದ. ಈತನ ಮೇಲಿನ ಆರೋಪವು ತನಿಖೆಯ ವೇಳೆ ಸಾಬೀತಾಗಿದ್ದರಿಂದ ಕೊಪ್ಪಳ ಮಹಿಳಾ ಪೊಲೀಸ್ ಠಾಣೆ(Koppal Police Station)ಯ ಪಿಐ ಪ್ರಕಾಶ ಮಾಳೆಯವರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಆರೋಪಿ ಮೇಲಿನ ಆರೋಪ(Girl Rape) ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ.ಗಳ ದಂಡವನ್ನು ವಿಧಿಸಲಾಗಿದೆ. ಅಲ್ಲದೆ ದಂಡದ ಮೊತ್ತದಲ್ಲಿ 25 ಸಾವಿರ ರೂ.ಗಳನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ: Noise Pollution: ದೊಡ್ಡ ಗಣಪತಿ ದೇವಸ್ಥಾನದ ಗಂಟೆ ಶಬ್ದಕ್ಕೆ ನೋಟಿಸ್ ಜಾರಿ...!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.