ಮುಂಬೈನಿಂದ ಬೆಂಗಳೂರಿಗೆ ಹಿಂದಿರುಗಿದ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್

ಕೆಂಪೇಗೌಡ ಅಂತರಾಷ್ಟ್ರೀಯ ಏರ್​ಪೋರ್ಟ್​ನಿಂದ ರಹಸ್ಯ ಸ್ಥಳಕ್ಕೆ ತೆರಳಿದ ಎಸ್.ಟಿ. ಸೋಮಶೇಖರ್.  

Last Updated : Jul 11, 2019, 09:31 AM IST
ಮುಂಬೈನಿಂದ ಬೆಂಗಳೂರಿಗೆ ಹಿಂದಿರುಗಿದ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್  title=

ಬೆಂಗಳೂರು: ರೆಬೆಲ್ ಕಾಂಗ್ರೆಸ್ ಶಾಸಕ ಎಸ್.ಟಿ ಸೋಮಶೇಕರ್ ಕಳೆದ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರೂ ಆಗಿರುವ ಯಶವಂತಪರ ಶಾಸಕ ಎಸ್.ಟಿ. ಸೋಮಶೇಖರ್ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಬಿಡಿಎ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ವಾಪಸಾಗಿದ್ದಾರೆ ಎನ್ನಲಾಗಿದೆ.

ಎಸ್.ಟಿ. ಸೋಮಶೇಖರ್ ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂಬ ವಿಷಯ ತಿಳಿದ ತಕ್ಷಣ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಬಿಟಿಎಂ ಲೇಔಟ್​ನಲ್ಲಿರುವ ಸೋಮಶೇಖರ್ ಅವರ ಮನೆಗೆ ತೆರಳಿದ್ದಾರೆ. ಡಿಕೆಶಿ ಮನೆಗೆ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಎಸ್.ಟಿ. ಸೋಮಶೇಖರ್ ಏರ್​ಪೋರ್ಟ್​ನಿಂದ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಏರ್​ಪೋರ್ಟ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಅಂತೆಯೇ ನಾನು ಮತ್ತೆ ಮುಂಬೈಗೆ ಹೋಗುವುದಿಲ್ಲ. ಬೆಂಗಳೂರಿನಲ್ಲಿಯೇ ಇರುತ್ತೇನೆ ಎಂದು ತಿಳಿಸಿದ್ದಾರೆ.

Trending News