ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Written by - Puttaraj K Alur | Last Updated : Jan 6, 2024, 04:12 PM IST
  • ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ
  • ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು
  • ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯ ಬಯಸಬಾರದು ಎಂದ ಸಿದ್ದರಾಮಯ್ಯ
ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ   title=
ದೇವೇಗೌಡರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿಯೇ ಕಾಂಗ್ರೆಸ್ ಅಂತ್ಯವಾಗಲಿದೆ ಎಂದ ದೇವೇಗೌಡರ ಹೇಳಿಕೆಗೆ ಶನಿವಾರ ಸರಣಿ ಟ್ವೀಟ್‍ ಮೂಲಕ ತಿರುಗೇಟು ನೀಡಿದ್ದಾರೆ. ‘ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಿಬಿಐ ಆಕ್ಷೇಪಣಾ ಅರ್ಜಿಗೆ ಡಿಕೆಶಿ ಪ್ರತಿಕ್ರಿಯೆ

‘ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು "ಸಂಘ"ದೋಷದ ಫಲ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡ ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ. ಜಾತ್ಯತೀತ ಜನತಾ ಪಕ್ಷ ಎನ್ನುವುದು "ಬಿಜೆಪಿಯ ಬಿ ಟೀಮ್" ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು  ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜವೆಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆಂಬ ವಿಶ್ವಾಸ ನನಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಯುವ ನಿಧಿ ಯೋಜನೆಯಡಿ ಹೆಚ್ಚು ನೊಂದಣಿ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News