ರಾಜ್ಯದ 106 ತಾಲೂಕುಗಳಲ್ಲಿ ‘ಕೃಷಿಭಾಗ್ಯ’ ಯೋಜನೆಗೆ ಮರುಚಾಲನೆ: ಸಿಎಂ ಸಿದ್ದರಾಮಯ್ಯ

ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

Written by - Puttaraj K Alur | Last Updated : Dec 24, 2023, 11:13 AM IST
  • ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ 3 ಫೇಸ್ ವಿದ್ಯುತ್ ಪೂರೈಕೆ
  • ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 100 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಸ್ಥಾಪನೆ
  • ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮ
ರಾಜ್ಯದ 106 ತಾಲೂಕುಗಳಲ್ಲಿ ‘ಕೃಷಿಭಾಗ್ಯ’ ಯೋಜನೆಗೆ ಮರುಚಾಲನೆ: ಸಿಎಂ ಸಿದ್ದರಾಮಯ್ಯ  title=
100 ಹೈ-ಟೆಕ್ ಹಾರ್ವೆಸ್ಟರ್ ಹಬ್

ಬೆಂಗಳೂರು: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.

‘ಮುಂಬರುವ ದಿನಗಳಲ್ಲಿ ಮಳೆ ಕೊರತೆಯಾದರೂ ನಾಡಿನ ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು ಎಂಬ ಸದಾಶಯದೊಂದಿಗೆ 100 ಕೋಟಿ ರೂ.  ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುತ್ತಿದ್ದೇವೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

7 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ

‘ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರವು ನಾಡಿನ ರೈತರ ಹಿತ ಕಾಪಾಡಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ಹಕ್ಕನ್ನು ವಾಪಸ್ ಕೊಟ್ಟಿರುವುದಕ್ಕೆ ಧನ್ಯವಾದ

100 ಹೈ-ಟೆಕ್ ಹಾರ್ವೆಸ್ಟರ್ ಹಬ್

‘ಕೃಷಿ ಚಟುವಟಿಕೆಗಳಿಗೆ ಆಧುನಿಕತೆಯ ಸ್ಪರ್ಶ ನೀಡಿ ಬಂಡವಾಳ ವೆಚ್ಚವನ್ನು ತಗ್ಗಿಸುವ ಹಾಗೂ ಅಧಿಕ ಇಳುವರಿ ರೈತರ ಕೈಸೇರುವಂತೆ ಮಾಡುವ ಸಲುವಾಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ' ಎಂದು ಅವರು ಹೇಳಿದ್ದಾರೆ.

4 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಸಕ್ರಮ

‘ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ರೈತರಿಗೆಭೂಒಡೆತನದ ಹಕ್ಕು

‘ಒಂದೂವರೆ ದಶಕಕ್ಕಿಂತ ಹೆಚ್ಚು ಕಾಲ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸಿ, ಭೂಒಡೆತನದ ಹಕ್ಕನ್ನು ರೈತರಿಗೆ ನೀಡಲಾಗುವುದು. ಪ್ರತಿಯೊಬ್ಬ ರೈತನು ಸ್ವಂತ ಭೂಮಿಯಲ್ಲಿ ಶ್ರಮದ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ' ಅಂತಾ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಟಾ ಹೇಳಿಕೆ..!

ಮೊದಲ ಕಂತಿನ ಬರಪರಿಹಾರ

ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ 2 ಸಾವಿರ ರೂ. ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ NDRF ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ' ಎಂದು ತಿಳಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News