ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ : ಸಂಪುಟ ಸಭೆಯ ನಂತರ ಮಾಹಿತಿ:  ಸಿಎಂ ಬೊಮ್ಮಾಯಿ

 ಮಾರ್ಚ್ 21: ಮಾರ್ಚ್ 24 ರಂದು ಸಚಿವ ಸಂಪುಟ ಸಭೆ  ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Written by - Prashobh Devanahalli | Edited by - Manjunath Naragund | Last Updated : Mar 21, 2023, 07:34 PM IST
  • ಮುದ್ದೇಬಿಹಾಳ ಕ್ಷೇತ್ರದಲ್ಲಿ1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ
  • ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ
  • ನಮ್ಮ ಕೆಲಸಗಳು ಮಾತನಾಡಬೇಕು ಎಂದರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ : ಸಂಪುಟ ಸಭೆಯ ನಂತರ ಮಾಹಿತಿ:  ಸಿಎಂ ಬೊಮ್ಮಾಯಿ title=

ಬಾಗಲಕೋಟೆ: ಮಾರ್ಚ್ 21: ಮಾರ್ಚ್ 24 ರಂದು ಸಚಿವ ಸಂಪುಟ ಸಭೆ  ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮುಧೋಳದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ- ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು!!

ಕಳೆದ  ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ.ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ.ಮುದ್ದೇಬಿಹಾಳ ಕ್ಷೇತ್ರದಲ್ಲಿ1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು. 

ಇದನ್ನೂ ಓದಿ- Karnataka Assembly Election: ಸಚಿವ ವಿ. ಸೋಮಣ್ಣ ಮುನಿಸಿಗೆ ಚಾಮರಾಜನಗರ ಸಾರಥ್ಯದ ಮುಲಾಮು ಹಚ್ಚಿದ ಹೈಕಮಾಂಡ್!

ವೇತನ ಹೆಚ್ಚಳ:

ಆರೋಗ್ಯ ಇಲಾಖೆ  ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿರುವ  ಬಗ್ಗೆ ಉತ್ತರಿಸಿ ಈಗಾಗಲೇ ಅವರಿಗೆ 15 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ ಎಂದರು. 2 ಎ ಸಮುದಾಯಗಳನ್ನು 3 ಬಿ ಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News