Road Accident: ವಿದ್ಯಾರ್ಥಿಗಳನ್ನು ಶಾಲೆಗೆ ಹೊತ್ತೊಯ್ಯುತ್ತಿದ್ದ ಖಾಸಗಿ ವಾಹನ ಪಲ್ಟಿ, 07 ಮಕ್ಕಳ ಸ್ಥಿತಿ ಗಂಭೀರ

ಖಾಸಗಿ ವಾಹನ ದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದರೆ, ಅವರಲ್ಲಿ ಏಳು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.  

Written by - Yashaswini V | Last Updated : Nov 18, 2022, 01:50 PM IST
  • ಪ್ರತಿ ನಿತ್ಯ ಖಾಸಗಿ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದ ಸ್ಟೂಡೆಂಟ್ಸ್
  • ಸಂತೆಕೆಲ್ಲೂರಿನ ಸರ್ಕಾರಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು
  • ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
Road Accident: ವಿದ್ಯಾರ್ಥಿಗಳನ್ನು ಶಾಲೆಗೆ ಹೊತ್ತೊಯ್ಯುತ್ತಿದ್ದ ಖಾಸಗಿ ವಾಹನ ಪಲ್ಟಿ, 07 ಮಕ್ಕಳ ಸ್ಥಿತಿ ಗಂಭೀರ  title=
Accident

ರಾಯಚೂರು:  ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಖಾಸಗಿ ವಾಹನ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, ಏಳು ಮಕ್ಕಳ ಸ್ಥಿತಿ ಗಂಭೀರವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕುಣೆಕೆಲ್ಲೂರು ಗ್ರಾಮದ ಬಳಿ ಈ ದುರಂತ ಘಟನೆ ಸಂಭವಿಸಿದೆ. 

ಖಾಸಗಿ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದರೆ, ಅವರಲ್ಲಿ ಏಳು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.  ಗಂಭೀರ ಗಾಯಗೊಂಡಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿಗೆ ಶಿಫ್ಟ್ ಮಾಡಲಾಗಿದೆ. ಇನ್ನುಳಿದ 13 ಮಕ್ಕಳಿಗೆ ಲಿಂಗಸ್ಗೂರು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ- Bangalore Population: ‘10 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ ದುಪ್ಪಟ್ಟು’

ವಾಸ್ತವವಾಗಿ, ಈ ಗ್ರಾಮದಲ್ಲಿ ಬಸ್ ಸೌಕರ್ಯವಿಲ್ಲದ ಕಾರಣದಿಂದಾಗಿ ಪ್ರತಿ ನಿತ್ಯ ಇಲ್ಲಿಂದ ಹತ್ತಾರು ವಿದ್ಯಾರ್ಥಿಗಳು ಖಾಸಗಿ ವಾಹನದಲ್ಲಿಯೇ ಶಾಲೆಗೆ ತೆರಳುತ್ತಿದ್ದರು. ಸಂತೆಕೆಲ್ಲೂರಿನ ಸರ್ಕಾರಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಇಂದು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. 

ಇದನ್ನೂ ಓದಿ- ಬೆಂಗಳೂರಿನ ಜನಸಂಖ್ಯೆ ಹೆಚ್ಚಳದ ಬಗ್ಗೆ ಬಿಬಿಎಪಿ ಕಮಿಷನರ್ ನೀಡಿದ ಎಚ್ಚರಿಕೆ ಏನು ಗೊತ್ತೇ?

ಇನ್ನು ಪಲ್ಟಿಯಾದ ವಿದ್ಯಾರ್ಥಿಗಳು ಸಾಗುತ್ತಿದ್ದ ಖಾಸಗಿ ವಾಹನದಲ್ಲಿ ಸುಮಾರು 30 ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News