ನೇಪಾಳಿ ಮಹಿಳೆ ರೇಪ್ ಕೇಸ್: ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್!

ಕುಡಿದ ಮತ್ತಿನಲ್ಲಿ ನೇಪಾಳಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ರೌಡಿಶೀಟರ್ ನನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದರು.

Written by - VISHWANATH HARIHARA | Edited by - Puttaraj K Alur | Last Updated : Apr 1, 2022, 08:11 PM IST
  • ಕುಡಿದ ಮತ್ತಿನಲ್ಲಿ ನೇಪಾಳಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ
  • ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಆರೋಪಿ ಎಸ್ಕೇಪ್
  • ಆರೋಪಿತ ರೌಡಿಶೀಟರ್ ಬಂಧನಕ್ಕೆ ಬಲೆ ಬೀಸಿದ ಡಿಜೆ ಹಳ್ಳಿ ಪೊಲೀಸರು
ನೇಪಾಳಿ ಮಹಿಳೆ ರೇಪ್ ಕೇಸ್: ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್!  title=
ಆರೋಪಿ ರೌಡಿಶೀಟರ್ ಎಸ್ಕೇಪ್!

ಬೆಂಗಳೂರು: ಅತ್ಯಾಚಾರ ಪ್ರಕರಣ(Rape Case)ಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಒಬ್ಬನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಆತನಿಗಾಗಿ ಡಿಜೆ ಹಳ್ಳಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕುಡಿದ ಮತ್ತಿನಲ್ಲಿ ನೇಪಾಳಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಗಡಿಪಾರು ಆಗಿದ್ದ ರೌಡಿಶೀಟರ್ ನನ್ನು ಡಿಜೆ ಹಳ್ಳಿ ಪೊಲೀಸರು(DJ Halli Police Station) ಬಂಧಿಸಿದ್ದರು. ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದಾಗ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ರೌಡಿಶೀಟರ್  ಆವೇಜ್(22) ಕೃತ್ಯವೆಸಗಿ ತಪ್ಪಿಸಿಕೊಂಡಿರುವ ಆರೋಪಿ. ಈತನ ಬಂಧನಕ್ಕಾಗಿ 2 ತಂಡಗಳನ್ನು ರಚಿಸಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ ಎಸ್.ಗುಳೇದ್ ತಿಳಿಸಿದ್ದಾರೆ.

ಇದನ್ನೂ ಓದಿ: ಎಸಿಬಿ ಕೆಲಸಕ್ಕೆ ನೋ ಸಾಥ್: ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ನಿಲ್ತಾ ರಾಜ್ಯ ಸರ್ಕಾರ..!?

ಸಂತ್ರಸ್ತ ಮಹಿಳೆಯ ಪತಿ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್(Security Guard) ಕೆಲಸ ಮಾಡುತ್ತಿದ್ದಾರೆ. ಎಣ್ಣೆ ಮತ್ತಲ್ಲಿ ನೇಪಾಳಿ ಕುಟುಂಬ(Nepali Family) ವಾಸವಿದ್ದ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದ ಅವೇಜ್ ಪ್ರಾಣಿಯಂತೆ ಮಹಿಳೆಯ ಮೈ ಕಚ್ಚಿ ವಿಕೃತಿ ಮೆರೆದಿದ್ದ. ಸಂತ್ರಸ್ತೆ ಈ ಬಗ್ಗೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿ ಅವೇಜ್‍ನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.

ಕತ್ತಲಿದ್ದ ಕಾರಣ ಪೊಲೀಸರು(DJ Halli Police Station) ಆರೋಪಿಯನ್ನು ಹಿಡಿಯಲು ಯತ್ನಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಸದ್ಯ ಆರೋಪಿ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ‌.

ಇದನ್ನೂ ಓದಿ: ಗೃಹ ಸಚಿವರು ಆಗಮಿಸಬೇಕಾದ ದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್; ಬದಲಾದ ಮಾರ್ಗ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News