S.V.Bhat : ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಎಸ್.ವಿ.ಭಟ್ ತಮ್ಮ 72ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾದರು.
ಭಾನುವಾರ ಬದಿಯಡ್ಕದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಕುಸಿದು ಬಿದ್ದ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಇದನ್ನು ಓದಿ- ಯಶಸ್ವಿಯಾದ ಜಿ೨೦ ಶೃಂಗಸಭೆ: ಭಾರತದ ರಾಜತಾಂತ್ರಿಕತೆಗೆ ಸಿಕ್ಕ ಗೆಲುವು ಎಂದ ತರೂರ್
ಎಸ್.ವಿ.ಭಟ್ ಮೂಲತಃ ಹೊನ್ನಾವರದ ಸಾಲಕೋಡು ಗ್ರಾಮದವರು. ಕುಂಬಳೆ, ಆಡೂರು, ಕಾಸರಗೋಡು, ಸೇರಿದಂತೆ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕಾರಡ್ಕ, ಮುಳ್ಳೇರಿಯದ ಶಾಲೆಗಳಲ್ಲಿ ಶಿಕ್ಷಕರಾಗಿಯೂ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಮಕ್ಕಳ ಕ್ರಿಯಾಶೀಲತೆ ಹೆಚ್ಚಿಸಲು ಶಾಲೆಗಳಲ್ಲಿ ಕಲಾವೇದಿಕೆ ಶುರುಮಾಡಿದ್ದಲ್ಲದೇ , ಸಾಹಿತ್ಯ ಅಭಿಯಾನ ಕಾರ್ಯಕ್ರಮ ಸಂಘಟಿಸಿದ್ದರು. ಅಲ್ಲದೇ ನಾಲ್ಕು ಬಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಗಡಿನಾಡ ಘಟಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಮತ್ತು ಇವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.