ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಆಗಸ್ಟ್ 15ರವರೆಗೆ ಸೆಕ್ಷನ್ 144 ಜಾರಿ

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

Last Updated : Aug 13, 2020, 08:10 AM IST
ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಆಗಸ್ಟ್ 15ರವರೆಗೆ ಸೆಕ್ಷನ್ 144 ಜಾರಿ title=

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರದೇಶಗಳಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ನು ವಿಸ್ತರಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಬುಧವಾರ (ಆಗಸ್ಟ್ 12) ಹೇಳಿದ್ದಾರೆ.

ಸೆಕ್ಷನ್ 144 ಒಂದು ಸ್ಥಳದಲ್ಲಿ ನಾಲ್ಕು ಅಥವಾ ಹೆಚ್ಚಿನ ಜನರನ್ನು ಒಟ್ಟುಗೂಡಿಸಲು ಅನುಮತಿಸುವುದಿಲ್ಲ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಕಾಂಗ್ರೆಸ್ ಶಾಸಕನ ಮನೆ ಮೇಲೆ ಕಲ್ಲು ತೂರಾಟ, ಪೊಲೀಸ್ ಗುಂಡೇಟಿಗೆ ಇಬ್ಬರು ಬಲಿ

"ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳ ಪ್ರಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಘಟನೆಯ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಲ್ಲಿಯವರೆಗೆ 146 ಜನರನ್ನು ಬಂಧಿಸಲಾಗಿದೆ" ಎಂದು ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಬೆಂಗಳೂರಿನ ಪುಲಕೇಶಿ ನಗರದಲ್ಲಿ ಜನಸಮೂಹವೊಂದು ಹಲ್ಲೆ ನಡೆಸಿ ಎರಡು ಪೊಲೀಸ್ ಠಾಣೆಗಳನ್ನು ಮತ್ತು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸವನ್ನು ಧ್ವಂಸಗೊಳಿಸಿದೆ. ಶಾಸಕರ ಸೋದರಲಿಯನ ಫೇಸ್‌ಬುಕ್ ಪೋಸ್ಟ್ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಪೊಲೀಸರು ಮೊದಲೇ ದೂರು ದಾಖಲಿಸಿಕೊಂಡಿದ್ದರೆ ಡಿ.ಜೆ.‌ ಹಳ್ಳಿ ಘರ್ಷಣೆ ಆಗುತ್ತಿರಲಿಲ್ಲ

ಪರಿಸ್ಥಿತಿಯನ್ನು ಹತೋಟಿಗೆ ತರಲು ಗಲಭೆಕೋರರ ಮೇಲೆ ಪೊಲೀಸರು ಗುಂಡು ಹಾರಿಸಿದ ನಂತರ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ. ಹಿಂಸಾಚಾರದಲ್ಲಿ 60 ಪೊಲೀಸರು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದು, ಇದರಿಂದಾಗಿ ಅನೇಕ ವಾಹನಗಳ ಹಾನಿಯಾಗಿದೆ. ಹಿಂಸಾಚಾರವನ್ನು ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯ ಪಿಎಫ್‌ಐನ ರಾಜಕೀಯ ಅಂಗವಾದ ಎಸ್‌ಡಿಪಿಐ ಪ್ರಚೋದಿಸಿದೆ ಎಂದು ಹೇಳಲಾಗಿದೆ.ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಎಸ್‌ಡಿಪಿಐನ ಸ್ಥಳೀಯ ನಾಯಕನನ್ನು ಬಂಧಿಸಲಾಗಿದೆ.

ಕೆಜಿ. ಹಳ್ಳಿ  ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಗಲಭೆಗೆ  ಪ್ರಚೋದನೆ ಹಿನ್ನಲೆಯಲ್ಲಿ SDPI ಮುಖಂಡನ ಬಂಧನ!ಜನಸಮೂಹವು ಕನಿಷ್ಠ ಐದು ಬಾರಿ ದಾಳಿ ಮಾಡಿದೆ ಮತ್ತು ಪ್ರತಿ ಬಾರಿಯೂ ಆಕ್ರಮಣ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಿಂಸಾಚಾರವನ್ನು ನಡೆಸುತ್ತಿರುವ ಹೆಚ್ಚಿನ ಸಂಖ್ಯೆಯ ಜನರು ಪ್ರದೇಶದ ಹೊರಗಿನವರು. ತಮ್ಮ ಗುರುತನ್ನು ಮರೆಮಾಚಲು ಹೊರಗಿನ ಜನರನ್ನು ಶಾಸಕರ ಮನೆ ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಲು ಕರೆ ನೀಡಲಾಗಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸ್ಥಳೀಯ ಮುಖಂಡ ಮುಜಮ್ಮಿಲ್ ಪಾಷಾ ಸೇರಿದಂತೆ 150 ಗಲಭೆಕೋರರನ್ನು ಪೊಲೀಸರು ಈವರೆಗೆ ಬಂಧಿಸಿದ್ದಾರೆ.

ಗಲಭೆಗೆ ಕಾರಣವೆನ್ನಲಾದ ಫೇಸ್ಬುಕ್ ಬುಕ್ ಪೋಸ್ಟ್ ಬಗ್ಗೆಯೇ ಅನುಮಾನ...
ಈ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸೋದರಳಿಯ ನವೀನ್ ಅವರನ್ನು ಬಂಧಿಸಲಾಗಿದ್ದು ಅವರ ಫೇಸ್ಬುಕ್ ಪೋಸ್ಟ್ ಬಗ್ಗೆಯೇ ಅನುಮಾನ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿಯೇ ನವೀನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದಕ್ಕೂ 15 ಗಂಟೆಗಳ ಹಿಂದೆ ನವೀನ್ ಫೇಸ್ಬುಕ್ ಖಾತೆಯಲ್ಲಿ ಒಂದು ಪೋಸ್ಟ್ ಶೇರ್ ಮಾಡಲಾಗಿದೆ. ಆದರೆ ವಿಚಾರಣೆ ವೇಳೆ ನವೀನ್ ತನ್ನ ಮೊಬೈಲ್ ಕಳುವಾಗಿದೆ ಎಂದು ಹೇಳುತ್ತಿದ್ದು ಘಟನೆಗೆ ಮೂಲ ಕಾರಣವಾಗಿರುವ ಫೇಸ್ಬುಕ್ ಪೋಸ್ಟ್ ಬಗ್ಗೆಯೇ ಅನುಮಾನ ಹುಟ್ಟುವಂತೆ ಮಾಡಿದೆ.

Trending News