ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ : ಪತಿ ರಜನೀಶ್ ಬಳಿಕ ಪತ್ನಿಗೆ ಖುಲಾಯಿಸಿದ ಅದೃಷ್ಟ

ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.

Written by - Krishna N K | Last Updated : Jul 26, 2024, 10:03 PM IST
    • ಶಾಲಿನಿ ರಜನೀಶ್ ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ
    • ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ
    • ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್
ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ : ಪತಿ ರಜನೀಶ್ ಬಳಿಕ ಪತ್ನಿಗೆ ಖುಲಾಯಿಸಿದ ಅದೃಷ್ಟ title=
Shalini Rajneesh

ಬೆಂಗಳೂರು : ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಗೆ ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಪತಿಯ ನಂತರ ಪತ್ನಿಗೆ ಅವಕಾಶ ಪಡೆದವರಲ್ಲಿ ಶಾಲಿನಿ ರಜನೀಶ್ ಎರಡನೇಯವರಾಗಿದ್ದಾರೆ. 

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಇದನ್ನೂ ಓದಿ:ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಅಭಿವೃದ್ಧಿ ಆಯುಕ್ತೆ  ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ರಾಜ್ಯದ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಪತಿಯ ನಂತರ ಪತ್ನಿ ವಹಿಸಿಕೊಳ್ಳುವುದು ಎರಡನೇ ಬಾರಿ ಆಗಲಿದೆ.

2000ರ ಡಿಸೆಂಬರ್‌ನಲ್ಲಿ ಬಿ.ಕೆ. ಭಟ್ಟಾಚಾರ್ಯ ಅವರ ನಂತರ ಅವರ ಪತ್ನಿ ಥೆರೇಸಾ ಭಟ್ಟಾಚಾರ್ಯ ಅವರು ಸಿಎಸ್‌ ಆಗುವ ಮೂಲಕ ರಾಜ್ಯದಲ್ಲಿ ಇತಿಹಾಸ..ಅವರ ಸಾಲಿಗೆ ರಜನೀಶ್ ಗೋಯಲ್ ಮತ್ತು ಶಾಲಿನಿ ರಜನೀಶ್ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ:ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಶಾಲಿನಿ ರಜನೀಶ್ 1989 ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು  ಇನ್ನೂ 3 ವರ್ಷದ ಸೇವಾವಧಿ ಹೊಂದಿದ್ದಾರೆ. ಜೇಷ್ಠತೆ ಪ್ರಕಾರ  ಶಾಲಿನಿ ರಜನೀಶ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಜೇಷ್ಠತೆ ಮತ್ತು ಹಿರಿತನ ಪ್ರಕಾರ ಅಜಯ್ ಸೇಠ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಅಜಯ್ ಸೇಠ್ ಬಳಿಕ ಶಾಲಿನ ರಜನೀಶ್ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಆದರೆ ಅಜಯ್ ಸೇಠ್ ಕೇಂದ್ರ ಸರ್ಕಾರದ ಸೇವೆಯಲ್ಲಿ ನಿಯೋಜನೆಯಾಗಿದ್ದಾರೆ. 

ಅಜಯ್ ಸೇಠ್ ಕೇಂದ್ರದಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರದಲ್ಲಿ ಆರ್ಥಿಕ ವ್ಯವಹಾರದ ಕಾರ್ಯದರ್ಶಿಯ ಮಹತ್ವದ ಹುದ್ದೆಯಲ್ಲಿರುವ ಅವರು ರಾಜ್ಯಕ್ಕೆ ಮರಳಲು ಒಲವು ತೋರಿಲ್ಲ. ಹೀಗಾಗಿ ಅಜಯ್ ಸೇಠ್ ಕಾರ್ಯಾವಧಿ 6-8ತಿಂಗಳು ಸೇರಿದಂತೆ ಹಿರಿತನವನ್ನು ಪರಿಗಣಿಸಿ ಶಾಲಿನಿ ರಜನೀಶ್ ಅವಕಾಶ ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News