ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು: ಬಿ.ಎಸ್.ಯಡಿಯೂರಪ್ಪ

ಈ ಹಿಂದೆ ರಾಜ್ಯ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪನವರ ಹೆಸರು ಇಡಬೇಕೆಂದು ನಿರ್ಧರಿಸಿತ್ತು. ಆದರೆ ಇದನ್ನು ಬಿಎಸ್‍ವೈ ನಿರಾಕರಿಸಿದ್ದರು.

Written by - Puttaraj K Alur | Last Updated : Feb 12, 2023, 01:07 PM IST
  • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರನ್ನೇ ಇಡಬೇಕೆಂದ ಬಿಎಸ್‍ವೈ
  • ರಾಜ್ಯ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡಬೇಕೆಂದು ನಿರ್ಧರಿಸಿತ್ತು
  • ಇದೇ ತಿಂಗಳ 27ರಂದು ಪ್ರಧಾನಿ ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡಲಿದ್ದಾರೆ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು: ಬಿ.ಎಸ್.ಯಡಿಯೂರಪ್ಪ  title=
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನೇ ಇಡಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾಳೆ ನಡೆಯಲಿರುವ ಅಧಿವೇಶನದಲ್ಲಿ ಕುವೆಂಪು ಅವರ ಹೆಸರು ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪನವರ ಹೆಸರು ಇಡಬೇಕೆಂದು ನಿರ್ಧರಿಸಿತ್ತು. ಆದರೆ ಇದನ್ನು ಬಿಎಸ್‍ವೈ ನಿರಾಕರಿಸಿದ್ದರು. ಇದೀಗ ಮತ್ತೆ ತಮ್ಮ ಹೆಸರು ಬೇಡವೆಂದು ಹೇಳಿರುವ ಅವರು, ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸುರಕ್ಷತೆಗೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವದಲ್ಲಿರಬೇಕು: ಅಮಿತ್ ಶಾ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಯಡಿಯೂರಪ್ಪನವರ ಹೆಸರಿಡಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೂಡ ಆಗಿತ್ತು. ಆದರೆ ತಮ್ಮ ಹೆಸರಿಡದಂತೆ ಯಡಿಯೂರಪ್ಪ ಮನವಿ ಮಾಡಿದ್ದರು. ಈ ಕುರಿತು ಸಿಎಂ ಬೊಮ್ಮಾಯಿಗೆ ಬಿಎಸ್‍ವೈ ಪತ್ರ ಬರೆದಿದ್ದರು. ಆದರೂ ಯಡಿಯೂರಪ್ಪನವರ ಹೆಸರನ್ನು ಕೇಂದ್ರಕ್ಕೆ ಕಳಿಸುವುದಾಗಿ ಸಿಎಂ ಹೇಳಿದ್ದರು.

ಫೆ.8ರಂದು ಶಿವಮೊಗ್ಗಕ್ಕೆ ಬಂದಿದ್ದ ಸಿಎಂ ಬೊಮ್ಮಾಯಿ ಬಿಎಸ್‍ವೈ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡುವುದಾಗಿ ಪುನರುಚ್ಛರಿಸಿದ್ದರು. ಇದಕ್ಕೆ ಮತ್ತೆ ಯಡಿಯೂರಪ್ಪನವರು ನಿರಾಕರಿಸಿದ್ದು, ಹಲವು ಊಹಾಪೋಹಗಳಿಗೆ ತೆರೆಯೆಳೆದಿದ್ದಾರೆ. ಕಳೆದ ಹಲವು ದಿನಗಳಿಂದ ಶಿವಮೊಗ್ಗ ಏರ್ಪೋರ್ಟ್ ಹೆಸರು ಚರ್ಚೆಗೆ ಒಳಗಾಗಿತ್ತು. ನಾಮಕರಣ ವಿಚಾರ ರಾಜಕೀಯ ಬಣ್ಣಕ್ಕೂ ತಿರುಗಿತ್ತು. ಈ ಹಿಂದೆ ಹಲವು ಹೆಸರುಗಳು ಕೇಳಿಬಂದಿದ್ದವು. ಆದರೆ ಎಸ್.ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪನವರ ಹೆಸರು ಮುಂಚೂಣಿಯಲ್ಲಿದ್ದವು.

ಇದನ್ನೂ ಓದಿ: ಈ ಬಾರಿ ಬಿಜೆಪಿ ಸೋಲಿಸಿ ಜನರು ಮತ್ತೆ ಕಾಂಗ್ರೆಸ್‍ಗೆ ಮತ್ತೆ ಆಶೀರ್ವಾದ ಮಾಡಲಿದ್ದಾರೆ: ಸಿದ್ದರಾಮಯ್ಯ

ಇದೇ ತಿಂಗಳ 27ರಂದು ಪ್ರಧಾನಿ ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡಲಿದ್ದಾರೆ. ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕತಿ ಕುವೆಂಪು ಅವರ ಹೆಸರನ್ನು ಬಿಎಸ್‍ವೈ ಫೈನಲ್ ಮಾಡಿದ್ದಾರೆ. ನನ್ನ ಹೆಸರು ಇಡುವುದು ಬೇಡವೆಂದು ಮೊದಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದ ಬಿಎಸ್‍ವೈ, ಪ್ರಧಾನಿ ಮೋದಿಯವರಿಂದಲೇ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಿಸಲಾಗುವುದು ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News