ನಿಮ್ಮ ಮಕ್ಕಳನ್ನು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಸೇರಿಸಬೇಕೆ? ನೀವು ಮಾಡಬೇಕಾಗಿದ್ದಿಷ್ಟು ..!

ಸಮಾಜ ಕಲ್ಯಾಣ ಇಲಾಖೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ 7,8, ಹಾಗೂ 9 ನೇ ತರಗತಿಗೆ 2020-21 ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

Last Updated : Nov 24, 2020, 05:13 PM IST
 ನಿಮ್ಮ ಮಕ್ಕಳನ್ನು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಸೇರಿಸಬೇಕೆ? ನೀವು ಮಾಡಬೇಕಾಗಿದ್ದಿಷ್ಟು ..! title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ 7,8, ಹಾಗೂ 9 ನೇ ತರಗತಿಗೆ 2020-21 ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

ಇದನ್ನು ಓದಿ: ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಇಲ್ಲಿದೆ ಸುವರ್ಣಾವಕಾಶ....!

ಆಸಕ್ತರು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 01 ಕೊನೆಯ ದಿನವಾಗಿರುತ್ತದೆ.

ಇದನ್ನು ಓದಿ: ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ವರ್ಗಕ್ಕೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kea.kar.nic.in & http://kreis.kar.nic.in ಅಥವಾ  ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0836-2447201 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Trending News